

ಕಾರ್ಕಳ,ನ.24: ಕೇಂದ್ರಿಯ ತೋಟದ ಬೆಳೆಗಳ ಸಂಶೋಧನಾ ಕೇಂದ್ರ ಕಾಸರಗೋಡು, ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ, ನಿ. ಅಜೆಕಾರು ಹಾಗೂ ಗ್ರಾಮ ಪಂಚಾಯತ್, ಮರ್ಣೆ ಇವರ ಸಂಯುಕ್ತ ಆಶ್ರಯದಲ್ಲಿ ಅಡಿಕೆ ಬೆಳೆಯಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವುಗಳಿಗೆ ಪರಿಹಾರ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವು ನ.30 ರಂದು ಅಜೆಕಾರು ರಾಮ ಮಂದಿರದಲ್ಲಿ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಜೋಸೆಫ್ ರಾಜ್ ಕುಮಾರ್, ಡಾ.ರಾಜ್ ಕುಮಾರ್, ಡಾ.ಭವಿಷ್ಯ ಹಾಗೂ ಡಾ.ತವಪ್ರಕಾಶ್ ಪಾಂಡ್ಯನ್ ಭಾಗವಹಿಸಲಿದ್ದಾರೆ. ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಶ್ರೀನಿವಾಸ ಬಿ.ವಿ ತಿಳಿಸಿದ್ದಾರೆ.






.
.
.
.
.
.
.
.
.
.
.
.
.
.
.
.
.
.
.
.
