ಬೆಂಗಳೂರು : ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಹಾಗೂ ಜೆಡಿಎಸ್ ಎಂದು ಪಾದಯಾತ್ರೆ ಹಮ್ಮಿಕೊಂಡಿವೆ. ಈ ಕುರಿತು ಇಂದು ಬೆಂಗಳೂರಿನ ಕೆಂಗೇರಿಯ ಕೆಂಪಮ್ಮ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪಾದಯಾತ್ರೆಗೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.
ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದೇವೆ. ಈ ಪಾದಯಾತ್ರೆ ಮುಗಿಯವಷ್ಟರಲ್ಲಿ ಸಿದ್ದಾರಾಮಯ್ಯ ರಾಜೀನಾಮೆ ನಿಶ್ಚಿತ. ನಮ್ಮ ಪಾದಯಾತ್ರೆ ಮುಗಿಯುವವದರ ಒಳಗಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಮುಂದುವರೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ಭ್ರಷ್ಟಚಾರ ತೊಲಗಿಸಲು ಪಾದಯಾತ್ರೆ ಮಾಡುತ್ತಿದ್ದೇವೆ. ಹಗರಣದಲ್ಲಿ ಕೋಟಿ ಕೋಟಿ ಲೂಟಿ ಮಾಡಿದ್ದಾರೆ. ನನ್ನ ಎದರಿಸಲು ಯಾರಿಗೂ ಸಾಧ್ಯವಿಲ್ಲ. ಜೆಡಿಎಸ್ ಭದ್ರ ಕೋಟೆಯ ಕಾರ್ಯಕರ್ತರನ್ನು ಕೊಂಡು ಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮರಾಸ್ವಾಮಿ ಹೇಳಿದರು.
ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಡಿವಿ ಸದಾನಂದ ಗೌಡ, ಸಂಸದರಾದ ಬಸವರಾಜ ಬೊಮ್ಮಾಯಿ, ಯದುವೀರ್ ಒಡೆಯರ್, ಎಂಎಲ್ಸಿ ಎಸ್ ಆರ್ ವಿಶ್ವನಾಥ್ ಸರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
`