Share this news

ಕಾರ್ಕಳ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ಕಾರ್ಕಳ ಹಿರಿಯಂಗಡಿ SNV ಪದವಿಪೂರ್ವ ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಜು. 26ರಂದು ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್. ಎನ್. ವಿ ಶಿಕ್ಷಣ ಸಂಸ್ಥೆಗಳ ಸಂಚಾಲಕರು ಹಾಗೂ ಕಾರ್ಕಳದ ಹಿರಿಯ ನ್ಯಾಯವಾದಿ ಎಂ. ಕೆ. ವಿಜಯ ಕುಮಾರ್ ವಹಿಸಿ ವಿದ್ಯಾರ್ಥಿಗಳ ಸಾಧನೆಯನ್ನು ಮೆಚ್ಚಿ ಶುಭವನ್ನು ಹಾರೈಸಿದರು.

ವೇದಿಕೆಯಲ್ಲಿ ಎಸ್. ಎನ್. ವಿ ಪ್ರೌಢಶಾಲೆ ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿಯರಾದ ಉಷಾ ಪಡಿವಾಳ್ ಹಾಗೂ ಶರ್ಮಿಳಾ ಹೆಗ್ಡೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಾದ ಧನ್ಯ ,ತ್ರಿಶಾ ಆರ್. ಶೆಟ್ಟಿ, ಸಾನಿಧ್ಯ ಆರ್. ಜೈನ್ ಹಾಗೂ ಶಾಶ್ವತಿ ಇವರುಗಳನ್ನು ಸನ್ಮಾನಿಸಲಾಯಿತು.ಪ್ರಸ್ತುತ ವರ್ಷದ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು.

ಕಾಲೇಜಿನ ಪ್ರಾಂಶುಪಾಲರು ಸ್ವಾಗತಿಸಿದರು, ಆಂಗ್ಲ ಭಾಷಾ ಉಪನ್ಯಾಸಕ ಶ್ರೀ ಅನಿಲ್ ಕುಮಾರ್ ಸಾಧಕರ ಪರಿಚಯ ವಾಚಿಸಿದರು.
ವಾಣಿಜ್ಯ ವಿಭಾಗದ ಉಪನ್ಯಾಸಕ ವೀರೇಂದ್ರ ಜೈನ್ ವಂದಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಸುಪ್ರೀತಾ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು.

 

 

 

 

Leave a Reply

Your email address will not be published. Required fields are marked *