

ಕಾರ್ಕಳ, ಸೆ.13: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಯಾವುದೋ ಚಲನಚಿತ್ರದ ವಿಡಿಯೋಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ಮುಖವನ್ನು ಎಡಿಟ್ ಮಾಡಿ ಲೋಫರ್ ನ್ ಮಗನ ತಲೆ ಬೇಕೇಬೇಕು ಎಂದು ಕೊಲೆ ಬೆದರಿಕೆ ಹಾಕಿದ ರೀತಿಯಲ್ಲಿ ಪೋಸ್ಟ್ ಮಾಡಿದ್ದಾನೆ ಎನ್ನಲಾದ ಆರೋಪದಲ್ಲಿ ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿ ಎಂಬಾತನನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಪ್ರಸಾದ್ ಶೆಟ್ಟಿ ಶಾಸಕ ಸುನಿಲ್ ಕುಮಾರ್ ವಿರುದ್ಧ ವೈಯುಕ್ತಿಕ ದ್ವೇಷದಿಂದ ಇಂತಹ ಪ್ರಚೋದನಕಾರಿ ಪೋಸ್ಟ್ ಹಾಕಿ ಹಿಂಸೆಗೆ ಪ್ರಚೋದನೆ ನೀಡಿದ್ದಾನೆ ಎಂದು ಬಿಜೆಪಿ ನಾಯಕರು ದೂರು ನೀಡಿದ್ದ ಹಿನ್ನಲೆಯಲ್ಲಿ ಶನಿವಾರ ರಾತ್ರಿಯೇ ಆರೋಪಿ ಪ್ರಸಾದ್ ಶೆಟ್ಟಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕಾರ್ಕಳದ ರಾಜಕಾರಣದಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ತೀರಾ ವೈಯುಕ್ತಿಕ ವಿಚಾರಗಳನ್ನು ಮುಂದಿಟ್ಟುಕೊAಡು ಪರಸ್ಪರ ದ್ವೇಷ ಭಾವನೆ ಮೂಡಿಸುತ್ತಿರುವ ಘಟನೆಗಳು ನಡೆಯುತ್ತಿದ್ದು, ಸಮಾಜದಲ್ಲಿ ಅಶಾಂತಿ ಹರಡುವವರ ವಿರುದ್ಧ ಪೊಲೀಸರು ಪಕ್ಷಾತೀತವಾಗಿ ಕಠಿಣ ಕಾನೂನು ಕ್ರಮ ಜರುಗಿಸಬೇಕಿದೆ.





.
.
.
.
.
.
.
.
.
.
.
.
.
.
.
.
.
.
.
.
