

ಬೆಂಗಳೂರು, ಆ 13: ಧರ್ಮಸ್ಥಳದ ಪರಿಸರದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂದು ಅನಾಮಧೇಯ ಸಾಕ್ಷಿದಾರರ ದೂರು ಆಧರಿಸಿ ರಾಜ್ಯ ಸರ್ಕಾರ ಈ ಪ್ರಕರಣದಲ್ಲಿ ವಿಶೇಷ ಆಸಕ್ತಿ ವಹಿಸಿ ತನಿಖೆಗೆ ಎಸ್‌ಐಟಿ ತಂಡ ರಚಿಸಿ ಈಗಾಗಲೇ ಶೋಧ ಕಾರ್ಯ ಮುಂದುವರಿದಿದೆ. ನಿರಂತರ ಶೋಧ ನಡೆದರೂ ಈವರೆಗೂ ಶವಗಳ ಸುಳಿವೇ ಸಿಗದ ಹಿನ್ನಲೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದಿದೆ.
ಸರ್ಕಾರದ ತನಿಖೆಗೆ ವಿಚಾರದಲ್ಲಿ ಪ್ರಗತಿ ಕಾಣದ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿಕೊಂಡಿದೆ ಎಂದು ಬಿಜೆಪಿ ಶಾಸಕರು ಸದನದಲ್ಲಿ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ನಡುವೆ ಯಲಹಂಕ ಶಾಸಕ ವಿಶ್ವನಾಥ್ ಅವರ ನೇತೃತ್ವದಲ್ಲಿ ಶಾಸಕರ ತಂಡವು ಆ 16ರಂದು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದು, ಸುಮಾರು 300ಕ್ಕೂ ಅಧಿಕ ವಾಹನಗಳ ಮೂಲಕ ಯಲಹಂಕದಿAದ ಧರ್ಮಸ್ಥಳ ಯಾತ್ರೆ ಕೈಗೊಳ್ಳಲಿದ್ದಾರೆ.
ಧರ್ಮಸ್ಥಳ ವಿಚಾರದಲ್ಲಿ ಸರ್ಕಾರ ಎಸ್‌ಐಟಿ ತಂಡ ರಚಿಸಿ 15 ದಿನ ಕಳೆದರೂ ಈವರೆಗೂ ನಿರೀಕ್ಷಿತ ಯಶಸ್ಸು ಸಿಗದ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ವ್ಯಾಪಲ ಪ್ರತಿಭಟನೆಗಳು ನಡೆದಿದ್ದು, ಈ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ಹೋರಾಟ ಇನ್ನು ಯಾವ ಹಂತಕ್ಕೆ ತಲುಪಲಿದೆ ಎಂದು ಕಾದು ನೋಡಬೇಕಿದೆ.



