Share this news

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದು ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ತರಾತುರಿಯಲ್ಲಿ ಅನುಮತಿ ನೀಡಿದಂತೆಯೇ ಹಿಂದಿನ ಇತರ ಬಾಕಿ ಪ್ರಕರಣಗಳ ಬಗ್ಗೆಯೂ ಗಮನಹರಿಸಿ ಎಂದು ಕಾಂಗ್ರೆಸ್ ನಾಯಕರು ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿ, ಬಿಜೆಪಿ ಅವಧಿಯ ಹಗರಣಗಳ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಆಗ್ರಹಿಸಿದ್ದರು.

ಆ ಬಳಿಕ ರಾಜ್ಯಪಾಲರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಸರ್ಕಾರಿ ಅಧಿಕಾರಿ / ನೌಕರರ ವಿರುದ್ಧ ಅಭಿಯೋಜನಾ ಮಂಜೂರಾತಿಗಾಗಿ ಲೋಕಾಯುಕ್ತ ಸಂಸ್ಥೆಯಿಂದ ಸ್ವೀಕೃತವಾಗಿರುವ ಪ್ರಕರಣಗಳ ಮಾಹಿತಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದೀಗ ಈ ವಿಚಾರ ಕಾಂಗ್ರೆಸ್ ನಾಯಕರಿಗೆ ಮುಳುವಾಯಿತೇ ಎನ್ನುವ ಪ್ರಶ್ನೆ ಮೂಡಿದೆ.

20-05-2023 ರಿಂದ ಇಂದಿನವರೆಗೆ ಲೋಕಾಯುಕ್ತ ಸಂಸ್ಥೆಯಿಂದ ಸ್ವೀಕೃತವಾಗಿರುವ ಸ್ವೀಕೃತಗೊಂಡಿರುವ ಪ್ರಕರಣಗಳ ಮಾಹಿತಿ ನೀಡುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಎಲ್ಲಾ ಇಲಾಖೆಗಳ ಅಪರ ಮುಖ್ಯ, ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಮುಖ್ಯ ಕಾರ್ಯದರ್ಶಿಗಳು, ತುರ್ತು ಎಂದು ಪರಿಗಣಿಸಿ ಒಂದು ವಾರದೊಳಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಾರೆ.

ಇದರಿಂದ ರಾಜ್ಯಪಾಲರು ವರ್ಸಸ್ ಸರ್ಕಾರದ ಜಟಾಪಟಿ ಮುಂದುವರಿಯುವ ಸಾಧ್ಯತೆಯೂ ಹೆಚ್ಚಾಗಿದ್ದು, ಮುಡಾ ಪ್ರಕರಣದ ಗುದ್ದಾಟ ಮತ್ತೊಂದು ಸ್ವರೂಪ ಪಡೆಯುವ ಲಕ್ಷಣಗಳು ಕಾಣುತ್ತಿವೆ. ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯಪಾಲರ ಮೇಲೆ ಕಾಂಗ್ರೆಸ್ ನಾಯಕರ ಒತ್ತಡ ಹೆಚ್ಚಾಗಿತ್ತು. ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದರು. ಜೆಡಿಎಸ್, ಬಿಜೆಪಿ ನಾಯಕರ ಬಾಕಿಯಿರುವ ಪ್ರಕರಣಗಳ ಇತ್ಯರ್ಥಕ್ಕೆ ಒತ್ತಾಯಿಸಿದ್ದರು. ಆ ಮೂಲಕ ರಾಜ್ಯಪಾಲರನ್ನು ಇಕ್ಕಟ್ಟಿಗೆ ಸಿಲುಕಿಸುವ ರಾಜಕೀಯ ದಾಳವನ್ನು ಕಾಂಗ್ರೆಸ್ ನಾಯಕರು ಹೂಡಿದ್ದರು.

                       in 

                          

                        

                       

Leave a Reply

Your email address will not be published. Required fields are marked *