Share this news

ಕಾರ್ಕಳ:ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನ ಪಂಪ್ ವೆಲ್ ವೃತ್ತದ ಬಳಿ ರಸ್ತೆಯಲ್ಲಿ ನಮಾಜ್ ನಡೆಸಿದ ಪ್ರಕರಣಕ್ಕೆ ರಾಜ್ಯ ಸರ್ಕಾರ ಒತ್ತಾಯಪೂರ್ವಕವಾಗಿ ಬಿ ರಿಪೋರ್ಟ್ ಸಲ್ಲಿಸಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ, ಆದರೆ ಕಾನೂನು ಉಲ್ಲಂಘನೆಯಾಗಿದೆ ಎಂದು ಎಂದು ಹೇಳುವುದೇ ತಪ್ಪು ಎನ್ನುವಂತಾಗಿದೆ.

ಪಂಪ್ ವೆಲ್ ಪ್ರಕರಣದಲ್ಲಿ ನಡು ರಸ್ತೆಯಲ್ಲಿ ನಮಾಜ್ ಮಾಡಿ ಸಮಾಜದ ಸ್ವಾಸ್ಥ್ಯ ಹಾಗೂ ಸಾರ್ವಜನಿಕ ಅನಾನುಕೂಲತೆ ಸೃಷ್ಟಿಸಿದವರನ್ನು ಬಂಧಿಸುವುದು ಬಿಟ್ಟು, ಪ್ರಕರಣವನ್ನು ಬೆಳಕಿಗೆ ತಂದ ಶರಣ್ ಪಂಪ್ ವೆಲ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಮಾತ್ರವಲ್ಲದೇ ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಅಧಿಕಾರಿಯನ್ನು ಕೂಡ ಕಡ್ಡಾಯ ರಜೆಯ ಮೇಲೆ ಕಳುಹಿಸಿದೆ.

ಒಂದು ಸಮುದಾಯದ ಓಲೈಕೆಗಾಗಿ ಇಡಿ ರಾಜ್ಯದ ಹಿತ ಕಡೆಗಣಿಸಲಾಗುತ್ತಿದೆ ಎಂದರೆ ಅದು ಜಿಹಾದಿ ಸರ್ಕಾರದಿಂದ ಮಾತ್ರ ಸಾಧ್ಯ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಈಗ ನಡೆಸುತ್ತಿರುವುದು ಸರ್ಕಾರವಲ್ಲ, ತಾಲಿಬಾನ್ ಸರ್ಕಾರ ಎಂದು ಸುನಿಲ್ ವಾಗ್ದಾಳಿ ನಡೆಸಿದ್ದಾರೆ.

 

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *