Share this news

ಬೆಂಗಳೂರು, ಅ.04: ಪ್ರತೀ ಸಲದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದವರು ನಕಲಿ ಮತಗಳನ್ನು ಹಾಕಿಸಿಕೊಂಡು ಅಧಿಕಾರಕ್ಕೆ ಬರುತ್ತಿದ್ದರು. ಒಂದೇ ವ್ಯಕ್ತಿಯಿಂದ ಎರಡು ಕಡೆ ಮತಗಳನ್ನು ಹಾಕಿಸುವುದು ಅಥವಾ ಸತ್ತವರ ಹೆಸರಿನಲ್ಲಿ ಮತಗಳನ್ನು ಹಾಕಿಸುತ್ತಿದ್ದರು,ಆದರೆ ಈಗ ಎಸ್‌ಐಆರ್ ನಿಂದ ಅವರಿಗೆ ತೊಂದರೆಯಾಗಿದೆ. ಹೀಗಾಗಿ ಸಿಎಂ ಡಿ.ಕೆ. ಶಿವಕುಮಾರ್ ನಕಲಿ ಮತದಾರರ ರಕ್ಷಣೆಗಾಗಿ ಚುನಾವಣಾಧಿಕಾರಿ ಕಚೇರಿ ಎದುರು ಧರಣಿ ನಡೆಸುವ ನಾಟಕವಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. 

ಹಾವೇರಿಯಲ್ಲಿ ಸುದ್ಧಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭದಿAದಲೂ ಬಹಳ ಸರಳವಾಗಿ ನಡೆದುಕೊಂಡು ಬರುತ್ತಿತ್ತು. ಪ್ರಾರಂಭದಲ್ಲಿ ಕಾಂಗ್ರೆಸ್‌ನವರು ಅಲ್ಲಲ್ಲಿ ಮಸೀದಿಯಲ್ಲಿ  ಅರ್ಜಿ ತುಂಬಿಸುವುದಕ್ಕೆ ಬಿಜೆಪಿ ವಿರೋಧಿಸಿತ್ತು. ಆದರೆ ನಂತರದ ಕ್ರಮಗಳ ಪ್ರಕಾರ ಇದು ಸರಳವಾಗಿ ಮುಗಿಯಬೇಕಿತ್ತು,  ಅಕ್ಟೋಬರ್ 8 ರಂದು ಕರಡು ಮತ ಪಟ್ಟಿಯನ್ನು ಕೊಡಬೇಕಾಗಿತ್ತು. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ನವರು ಚುನಾವಣಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿ ಗೊಂದಲ ಸೃಷ್ಟಿಸಿದ್ದಾರೆ. ನಮ್ಮ ಪಕ್ಷದ ಪ್ರಮುಖರು ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಈಗ ಕಾನೂನು ಪ್ರಕಾರ ಎಲ್ಲವೂ ಹೊರಬರುತ್ತಿದೆ ಎಂದಿರುವ ಅವರು, ರಾಜ್ಯ ಸರ್ಕಾರಕ್ಕೆ ನೇರವಾಗಿ ಇದರ ವಿರುದ್ಧ ಕೇಸ್ ಹಾಕುವ ಯಾವುದೇ ಅಧಿಕಾರವಿಲ್ಲ, ಇದು ಸಂಪೂರ್ಣವಾಗಿ ಚುನಾವಣಾ ಅಧಿಕಾರಿಗಳು ಮಾಡಬೇಕಾದ ಕೆಲಸ. ಕಾನೂನಿನ ಪ್ರಕಾರ ಅರ್ಹರ ಮತಗಳು ಮಾತ್ರ ರಕ್ಷಿಸಲ್ಪಡಬೇಕು ಮತ್ತು ಅನರ್ಹರ ಮತಗಳನ್ನು ತೆಗೆದುಹಾಕಬೇಕು ಎನ್ನುವುದು ನಮ್ಮ ಸ್ಪಷ್ಟ ನಿಲುವು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  

ಎಸ್ ಐ ಆರ್ ಪ್ರಕ್ರಿಯೆ ಶುರುವಾದ ನಂತರ ನಡೆದ ಎಲ್ಲಾ ಚುನಾವಣೆಗಳನ್ನು ರದ್ದುಪಡಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನವರು ಎಲ್ಲಾ ಕಡೆ ಸೋತಿದ್ದಾರೆ. ಅದಕ್ಕಾಗಿ ಕುಂಟು ನೆಪ ಹೇಳುತ್ತಿದ್ದಾರೆ. ಅವರ ಪಕ್ಷ ಯಾಕೆ ಸೋತಿದೆ ಅನುವುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮಾನತು ಮಾಡಬೇಕೆಂಬ ಬೇಡಿಕೆಗೆ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹಾಗೂ ಅವರ ಮಿತ್ರ ಪಕ್ಷದವರಿಗೆ ದೇಶದ ಅಭಿವೃದ್ಧಿ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರು ದೇಶದಲ್ಲಿ ಹೇಗಾದರೂ ಮಾಡಿ ದಂಗೆ ಎಬ್ಬಿಸಬೇಕೆಂದು ಬಯಸುತ್ತಿದ್ದಾರೆ. ದೇಶದ ಜನರಿಗೆ ಸತ್ಯಾಂಶ ಏನೆಂದು ಗೊತ್ತಿದೆ, ಕಾಂಗ್ರೆಸ್ ಸುಳ್ಳು ಪ್ರಚಾರಕ್ಕೆ ಸೊಪ್ಪು ಹಾಕುವುದಿಲ್ಲ ಎಂದು ಹೇಳಿದರು.

 

 

 

 

     

.

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *