
.
.
.
.

ಚಿಕ್ಕಬಳ್ಳಾಪುರ,ಪೆ.06: ಶಿಡ್ಲಘಟ್ಟ ಪೌರಾಯುಕ್ತಗೆ ಕೈ ಮುಖಂಡ ರಾಜೀವ ಗೌಡ ಧಮ್ಕಿ ಹಾಕಿದ ಪ್ರಕರಣ ರಾಜ್ಯದಲ್ಲಿ ಭಾರೀ ಸುದ್ದಿಯಾದ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಸರ್ಕಾರಿ ಅಧಿಕಾರಿಗೆ ಧಮ್ಕಿ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗ ಎಂದು ಹೇಳಿಕೊಂಡು ಯುವ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ ಎಂಬಾತ ಧಮ್ಕಿ ಹಾಕಿದ್ದಾನೆ ಎನ್ನಲಾದ ಧಮ್ಕಿ ಹಾಕಿದ ಆಡಿಯೋ ವೈರಲ್ ಆಗಿದ್ದು, ಈ ಪ್ರಕರಣವು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತಂದಿದೆ.
ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರ ಬಣದಲ್ಲಿ ಗುರುತಿಸಿಕೊಂಡಿರುವ ಚಿಕ್ಕಬಳ್ಳಾಪುರ ಕಾಂಗ್ರೆಸ್ ಮುಖಂಡ ನಾಗೇಶ್ ರೆಡ್ಡಿ ಎಂಬಾತ ಸರ್ಕಾರಿ ಅಧಿಕಾರಿಗೆ ಧಮ್ಕಿ ಹಾಕಿದ್ದಾರೆ ಎನ್ನುವ ಆಡಿಯೋ ಇದೀಗ ಭಾರೀ ವೈರಲ್ ಆಗಿದೆ. ಬಿಜೆಪಿಗೆ ಬೆಂಬಲ ಕೊಡ್ತೀಯಾ ಎಂದು ಕೆಟ್ಟ ಕೆಟ್ಟ ಪದಗಳಲ್ಲಿ ನಿಂದಿಸಿದ್ದಾರೆ ಎನ್ನಲಾಗ್ತಿದೆ. ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗ ಹಾಗೂ ಕಾಂಗ್ರೆಸ್ ಮುಖಂಡ ನಾಗೇಶ್ ರೆಡ್ಡಿ ಎಂಬುವವರು ಬಿಎಲ್ಓ ಆಫೀಸರ್ ಹಾಗೂ ಶಿಕ್ಷಕ ಶಿವಶಂಕರ್ ಜೊತೆ ಮಾತಾಡಿರುವ ಆಡಿಯೋ ವೈರಲ್ ಆಗಿದೆ. ಬಿಜೆಪಿಗೆ ಸಪೋರ್ಟ್ ಮಾಡ್ತೀಯಾ ಎಂದು ಅಧಿಕಾರಿಗೆ ಕೆಟ್ಟ-ಕೆಟ್ಟ ಪದಗಳಲ್ಲಿ ನಿಂದಿಸಿದ್ದಾರೆ.

.
.
.
.