
ಬೆಂಗಳೂರು,ಡಿ.14: ಕಾಂಗ್ರೆಸ್ ಹಿರಿಯ ನಾಯಕ,ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(94) ಅವರು ಡಿ.14 ಭಾನುವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
1931 ರಲ್ಲಿ ಜನಿಸಿರುವ ಶಾಮನೂರು ಶಿವಶಂಕರಪ್ಪ ಅವರು ಸುಧೀರ್ಘ ಕಾಲ ರಾಜಕಾರಣ ಮಾಡಿದ್ದು, 6 ಬಾರಿ ಶಾಸಕರಾಗಿ ಸಿದ್ದರಾಮಯ್ಯ ಸಂಪುಟದಲ್ಲಿ ತೋಟಗಾರಿಕಾ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಅವರು ಕಳೆದ 1 ತಿಂಗಳಿನಿಂದ ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ 6.45ಕ್ಕೆ ನಿಧರಾಗಿದ್ದಾರೆ.
ಹಿರಿಯ ಧುರೀಣ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಆರ್.ಅಶೋಕ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
.
.
