ಕಾರ್ಕಳ: ಬೈಲೂರು ಸಮೀಪದ ಎರ್ಲಪಾಡಿ ಉಮ್ಮಿಕಲ್ ಬೆಟ್ಟದ ಮೇಲೆ ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್ ಹಾಗೂ ಕಂಚಿನ ಪ್ರತಿಮೆಯ ಹಗರಣದ ವಿರುದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಜುಲೈ 23 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ಬಳಿ ಇರುವ ಮಹಾತ್ಮಾ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರು, ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರುಗಳು, ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ವಿಧಾನಸಭಾ ಸ್ಪರ್ಧಿಗಳು, ಪಧಾದಿಕಾರಿಗಳು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಿಂದಲೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
