ಹುಬ್ಬಳ್ಳಿ : ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಎಲ್ಲಾ 3 ಕ್ಷೇತ್ರಗಳಲ್ಲಿ ಕೂಡ ಕಾಂಗ್ರೆಸ್ ಪಕ್ಷ ಗೆಲ್ಲಿದೆ ಎಂದು ಡಿಸಿಎಂ ಡಿಕೆ ಶಿವಕುಮರ್ ವಿಶ್ವಾಸ ವ್ಯಕ್ತಪಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಸಂಡೂರು ಹಾಗೂ ಶಿಗ್ಗಾವಿ ವಿಧಾಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಪರ ಉತ್ತಮ ವಾತಾವರಣವಿದೆ.ಈಗಾಗಲೇ ಸಂಡೂರು ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇನೆ. ಶಿಗ್ಗಾವಿಯಲ್ಲಿ ಕಾರ್ಯಕರ್ತರ ಜೊತೆಗೆ ನಾನು ಚರ್ಚೆ ಮಾಡಿದ್ದೇನೆ.ಬಸವರಾಜ್ ಬೊಮ್ಮಾಯಿ ವಿರುದ್ಧ ಜನಾಕ್ರೋಶದ ಅಲೆಯಿದ್ದು, ಕಾರ್ಯಕರ್ತರಿಗೆ ಟಿಕೆಟ್ ಕೊಡುತ್ತೇನೆ ಎಂದು ಕೊಟ್ಟಿಲ್ಲವಂತೆ ಹೀಗಾಗಿ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿ ಎ ನೌಕರ ಸೂಸೈಡ್ ಮಾಡಿಕೊಂಡಿರುವ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಚಿವರ ಆಪ್ತರಾಗಲಿ ಯಾರೇ ಆಗಲಿ ನಿರ್ದಾಕ್ಷಿಣ್ಯ ಕ್ರಮವಾಗುತ್ತದೆ. ಚುನಾವಣಾ ಸಮಯದಲ್ಲಿ ಈ ರೀತಿಯ ಆರೋಪ ಸಹಜ ಕೆಲವರು ಚುನಾವಣಾ ಸಂದರ್ಭದಲ್ಲಿ ಇಂತಹದನ್ನು ತರುತ್ತಾರೆ.ಕಾನೂನಿನ ಪ್ರಕಾರ ತನಿಖೆ ಆಗುತ್ತದೆ ಎಂದು ಡಿಕೆ ಶಿವಕುಮಾರ್ ಹೇಳಿದರು.