
ಬಾಗಲಕೋಟೆ /ದಾವಣಗೆರೆ,ಮೇ.04 : ವಿಧಾನಸಭಾ ಉಪಚುನಾವಣೆಯ ಜಿದ್ದಾಜಿದ್ದಿನ ಕ್ಷೇತ್ರಗಳಾಗಿದ್ದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರ್ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಎರಡೂ ಕ್ಷೇತ್ರಗಳನ್ನು ಗೆದ್ದರೆ, ಅಸಮರ್ಥ ನಾಯಕತ್ವ ಹಾಗೂ ಒಗ್ಗಟ್ಟಿನ ಕೊರತೆಯಿಂದ ಎರಡೂ ಕ್ಷೇತ್ರಗಳಲ್ಲಿ ಸೋತಿದೆ.
ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಅವರು ಸ್ಪರ್ಧಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅವರು ಸ್ಪರ್ಧೆ ಮಾಡಿದ್ದರು. ಇನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ಸ್ಪರ್ಧಿಸಿದ್ದರು.
21ನೇ ಸುತ್ತಿನಲ್ಲಿ ಉಮೇಶ್ ಮೇಟಿ ಅವರಿಗೆ 21,866 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಒಟ್ಟು 97,841ಮತಗಳು ಬಂದಿದ್ದು ಇನ್ನು ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರಿಗೆ 76,075 ಮತಗಳು ಬಂದಿವೆ. ಅದೇ ರೀತಿಯಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ ಶಾಮನೂರು ಅವರು ಭರ್ಜರಿ ಗೆಲುವು ಕಂಡಿದ್ದಾರೆ. 6430 ಮತಗಳಿಂದ ಸಮರ್ಥ ಶಾಮನವರು ಅವರು ಗೆಲುವು ಸಾಧಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಅವರು ಸೋತಿದ್ದಾರೆ. ಇನ್ನು ಮೂರು ಮಷೀನ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಮತ ಎಣಿಕೆಯಲ್ಲಿ ವಿಳಂಬವಾದ ಹಿನ್ನಲೆಯಲ್ಲಿ ಫಲಿತಾಂಶ ಘೋಷಣೆಯಲ್ಲಿ ಸ್ವಲ್ಪ ವಿಳಂಬವಾಗಿತ್ತು. ಇದೀಗ ಎರಡೂ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ.



.
.
.
.
.
.
.
.
.
.
.
.
.
.
.
.
.
.
.
.
