ಮಂಗಳೂರು : ದೇಶಾದ್ಯಂತ ರೈಲು ಅಪಘಾತಕ್ಕೆ ಸಂಚು ನಡೆಯುತ್ತಿರುವ ಹೊತ್ತಲ್ಲೇ ಕರ್ನಾಟಕದಲ್ಲೂ ಇಂತಹದ್ದೇ ಘಟನೆಯೊಂದು ಬೆಳಕಿಗೆ ಬಂದಿದ್ದು, ರೈಲು ಹಳಿ ಮೇಲೆ ಕಲ್ಲು ಇಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಿAದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಆಗಂತುಕರು ಜಲ್ಲಿ ಕಲ್ಲುಗಳನ್ನು ಸುರಿದಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ತಡರಾತ್ರಿ ಸುಮಾರಿಗೆ ತೊಕ್ಕೊಟ್ಟುವಿನ ರೈಲ್ವೇ ಹಳಿಯಲ್ಲಿ ರೈಲುಗಳು ಚಲಿಸುವ ಸಂದರ್ಭದಲ್ಲಿ ದೊಡ್ಡ ಸದ್ದು ಕೇಳಿ ಸ್ಥಳೀಯರಿಗೆ ಆತಂಕ ಉಂಟಾಗಿತ್ತು. ರೈಲೊಂದು ಕೇರಳ ಕಡೆಗೆ ತೆರಳಿದ ವೇಳೆ ದೊಡ್ಡ ಶಬ್ದ ಕೇಳಿಸಿತ್ತು, ಬಳಿಕ ಇನ್ನೊಂದು ರೈಲು ಚಲಿಸುವಾಗ ಮತ್ತೊಮ್ಮೆ ದೊಡ್ಡ ಸದ್ದು ಕೇಳಿತ್ತು. ಕೆಲವು ಮಂದಿ ಭೂಕಂಪವಾಗಿರಬಹುದು ಎಂದುಕೊAಡಿದ್ದರು. ರೈಲ್ವೆ ಹಳಿ ಕಡೆಯಿಂದ ಶಬ್ದ ಕೇಳಿದ್ದರಿಂದ ಆ ಕಡೆಗೆ ಸ್ಥಳೀಯರು ಬಂದು ಪರಿಶೀಲನೆ ನಡೆಸಿದ್ದಾರೆ, ಆಗ ಹಳಿ ಮೇಲೆ ಜಲ್ಲಿಕಲ್ಲುಗಳನ್ನು ಸುರಿದಿರುವುದು ಕಂಡುಬAದಿದೆ. ರೈಲ್ವೇ ಪೊಲೀಸ್ ಠಾಣೆ ಮತ್ತು ಉಳ್ಳಾಲ ಪೊಲೀಸ್ ಠಾಣೆಗೆ ಸ್ಥಳೀಯರ ಮಾಹಿತಿ ನೀಡಲಾಗಿದೆ.
ಇತ್ತೀಚೆಗಷ್ಟೇ ಉಗ್ರ ಸಂಘಟನೆ ಎಚ್ಚರಿಕೆ ಬೆನ್ನಲ್ಲೇ ಮತ್ತಷ್ಟು ಹೆಚ್ಚಾದ ಆತಂಕ ಹೆಚ್ಚಾಗಿದೆ, ಪಾಕ್ ಭಯೋತ್ಪಾದಕ ಫರ್ಹಾತುಲ್ಲಾ ಘೋರಿ ಭಾರತದಾದ್ಯಂತ ರೈಲುಗಳನ್ನು ಹಳಿ ತಪ್ಪಿಸುವ ಎಚ್ಚರಿಕೆ ನೀಡಿದ್ದ, ದೇಶದ ಹಲವೆಡೆ ಎನ್.ಐ.ಎ ಮತ್ತು ಭಯೋತ್ಪಾದಕ ನಿಗ್ರಹ ದಳದ ಮೂಲಕ ತನಿಖೆ ನಡೆಯುತ್ತಿದೆ.