Share this news

ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬAಧಿಸಿದAತೆ ಹೈಕೋರ್ಟ್ ಆದೇಶದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ. ಮುಡಾ ಅಕ್ರಮಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರ ಥಾವರ್ ಚಂದ್ ಗೆಹ್ಲೋಟ್ ಸರ್ಕಾರದ ಅಡ್ವೋಕೇಟ್ ಜನರಲ್‌ಗೆ ಸೂಚನೆ ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ದೂರಿನ ಮೇರೆಗೆ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಸಂಬAಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು,ಕಾನೂನು ಕ್ರಮ ಜರುಗಿಸುವಂತೆ ಹೇಳಿದ್ದಾರೆ.
ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ, ಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ, ಹೈಕೋರ್ಟ್ ಸಿಎಂ ವಿರುದ್ಧದ ತನಿಖೆಗೆ ಆದೇಶಿಸಿತ್ತು. ಈ ತೀರ್ಪನ್ನು ಜಮೀರ್ ಅಹಮ್ಮದ್ ಖಾನ್, ಮುಡಾ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು,ನ್ಯಾಯಾಲಯದ ತೀರ್ಪು ರಾಜಕೀಯ ತೀರ್ಪು ಎಂದು ಹೇಳಿದ್ದರು. ಆ ಹಿನ್ನೆಲೆಯಲ್ಲಿ ಮುಡಾ ದೂರುದಾರರಲ್ಲೊಬ್ಬರಾದ ಟಿ.ಜೆ. ಅಬ್ರಹಾಂ ಅವರು ಜಮೀರ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ದೂರು ನೀಡಿದ್ದರು.
ಜಮೀರ್ ಅಹಮ್ಮದ್ ಖಾನ್ ಅವರು ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಜಮೀರ್ ಅಹಮ್ಮದ್ ಖಾನ್ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅಬ್ರಾಹಂ ಕಿಡಿಕಾರಿದ್ದರು. ಮತ್ತೊಂದು ಹೆಜ್ಜೆ ಮುಂದೆ ಹೋಗಿ ಜಮೀರ್ ಅಹಮ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಈ ದೂರಿನ ಮೇರೆಗೆ ರಾಜ್ಯಪಾಲರು ಜಮೀರ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *