ಬೆಂಗಳೂರು,ಸೆ.02 : ಭೋವಿ ಅಭಿವೃದ್ಧಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದು,ಈ ಕಾರಣದಿಂದ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನುವ ಮಾಹಿತಿ ಸಿಎಂ ಕಚೇರಿಯಿಂದ ತಿಳಿದು ಬಂದಿದೆ.
ಭೋವಿ ನಿಗಮದಲ್ಲಿ ಲಂಚದ ಆರೋಪ ಬಯಲಾಗುತ್ತಿದ್ದಂತೆ ರಾಜೀನಾಮೆಗೆ ಸೂಚನೆ ನೀಡಿದ್ದಾರೆ ಹಾಗಾಗಿ ರವಿಕುಮಾರ್ ಶೀಘ್ರದಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ವಾಲ್ಮೀಕಿ ಅಭಿವೃದ್ದಿ ನಿಗಮ, ಮುಡಾ ಹಗರಣಗಳ ಆರೋಪದಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧಪಕ್ಷಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ನಡುವೆ ಭೋವಿ ಅಭಿವೃದ್ದಿ ನಿಗಮದಲ್ಲಿನ ಹಗರಣದ ಆರೋಪ ಸರ್ಕಾರಕ್ಕೆ ಮುಜುಗರ ತಂದಿದೆ.