Share this news

 

 

 

 

ಚಿತ್ರದುರ್ಗ, ನ,26 : ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಫೋಕ್ಸೋ ಕೇಸ್‌ನಲ್ಲಿ ಕೊನೆಗೂ ಮರುಘಾ ಶ್ರೀಗಳನ್ನು ಖುಲಾಸೆಗೊಳಿಸಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿ ಕೇಸ್‌ನ ವಿಚಾರಣೆ ನಡೆದಿತ್ತು.

ಏನಿದು ಪ್ರಕರಣ?

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಆರೋಪಿ ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಬಂಧನಕ್ಕೊಳಗಾಗಿದ್ದರು. ಬಳಿಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅ.13 ರಂದು ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಾಗಿತ್ತು. ಆ ಕೇಸಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿಯೂ ಎಂದು ಕೂಡ ಉಲ್ಲೇಖಿಸಿದ್ದರು.ಈ ದೂರಿನ ಅನ್ವಯ ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ, ಎ6 ಮುರುಘಾಶ್ರೀ ಸಹಾಯಕ ಮಹಾಲಿಂಗ, ಎ7 ಅಡುಗೆಭಟ್ಟ ಕರಿಬಸಪ್ಪ ವಿರುದ್ದ ಕೇಸ್ ದಾಖಲಾಗಿದ್ದು, ಸಂಪೂರ್ಣ ತನಿಖೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಹಾಗೂ ಚಿತ್ರದುರ್ಗ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡವು 2022ರ ಅ.27 ರಂದು 694 ಪುಟಗಳ ಚಾರ್ಜ್ಶೀಟ್ ಸಲ್ಲಿಸಿತ್ತು. ಅದರಲ್ಲಿ 347 ಪುಟಗಳ ಎ ಮತ್ತು ಬಿ ಎಂದು ಎರಡು ಸೆಟ್ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಕಳೆದ 2023ರ ಜ.10ಕ್ಕೆ ದಾಖಲಾದ 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು 761 ಪುಟಗಳ ಚಾರ್ಜ್ಶೀಟ್‌ನ್ನು ಸಲ್ಲಿಸಿದ್ದರು. ಇಷ್ಟೆಲ್ಲ ಸಾಕ್ಷ್ಯಾಧಾರ ಹಾಗೂ ಚಾರ್ಜ್ಶೀಟ್ ಮೇಲೆ ಚಿತ್ರದುರ್ಗ ನ್ಯಾಯಾಲಯ ವಿಚಾರಣೆ ನಡೆಸಿತ್ತು. ವಿಚಾರಣೆ ನಡಯುವಾಗಲೇ 2023ರ ನ.8 ರಂದು ಹೈಕೋರ್ಟ್ ನಿಂದ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ನ.16ರಿಂದು ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದರು.

    

   

             

     

             

           
   

 

 

   

             

     

             

       
   

  .      

   

             

     

             

           
   

 

 

   

             

     

             

       
   

                

   

             

     

             

           
   

 

 

   

             

     

             

       
   

 

Leave a Reply

Your email address will not be published. Required fields are marked *