
ನವದೆಹಲಿ,ಡಿ.09: ಭಾರತೀಯ ಪೌರತ್ವ ಪಡೆಯುವ ಮೊದಲು ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಸೇರಿಸಿದ್ದಕ್ಕಾಗಿ ಸೋನಿಯಾ ಗಾಂಧಿಯವರ ವಿರುದ್ಧ ಎಫ್ಐಆರ್ ದಾಖಲಿಸಲು ದೆಹಲಿಯ ಅವೆನ್ಯೂ ನ್ಯಾಯಾಲಯವು ಮಂಗಳವಾರ ನೋಟಿಸ್ ಜಾರಿ ಮಾಡಿದೆ. ನಕಲಿ ದಾಖಲೆಗಳನ್ನು ಬಳಸಿ, ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲು 1980 ರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೂರುದಾರ ವಿಕಾಸ್ ತ್ರಿಪಾಠಿಯವರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ತಿರಸ್ಕೃರಿಸಿದ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ವಿಕಾಸ್ ತ್ರಿಪಾಠಿ ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.ಈ ಅರ್ಜಿಯನ್ನು ಪರಿಗಣಿಸಞÂದ ನ್ಯಾಯಾಯಲವು ಮಂಗಳವಾರ ನೋಟಿಸ್ ಜಾರಿ ಮಾಡಿ ಈ ಪ್ರಕರಣದ ವಿಚಾರಣೆಯನ್ನು 2026ರ ಜನವರಿ 06ಕ್ಕೆ ಮುಂದೂಡಿದೆ. ಇದಲ್ಲದೇ ರೌಸ್ ಅವೆನ್ಯೂ ನ್ಯಾಯಾಲಯಗಳ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರ ಪ್ರತಿಕ್ರಿಯೆ ಕೋರಿದರು.
1982 ರಲ್ಲಿ ಗಾಂಧಿಯವರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಿ 1983 ರಲ್ಲಿ ಮರು ನಮೂದಿಸಲಾಗಿದೆ ಎಂಬುದು ಅವರ ಪ್ರಕರಣವಾಗಿದೆ. ಕಾಂಗ್ರೆಸ್ ನಾಯಕಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ನಕಲಿ ದಾಖಲೆಗಳನ್ನು ಬಳಸಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ಆರೋಪಿ ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದರು.
ಕೆಳ ಹಂತದ ನ್ಯಾಯಾಲಯವು ಸೋನಿಯಾ ಗಾಂಧಿಯವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸುವ ಮೂಲಕ ಭಾರತೀಯ ಚುನಾವಣಾ ಆಯೋಗದ ಅಧಿಕಾರ ವ್ಯಾಪ್ತಿಯನ್ನು ಅತಿಕ್ರಮಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ವಂಚನೆ ಅಥವಾ ನಕಲಿ ಎಂಬ ಶಾಸನಬದ್ಧ ಅಂಶಗಳನ್ನು ಸಾಬೀತುಪಡಿಸಲು ಅಗತ್ಯ ವಿವರಗಳು ಇಲ್ಲದೇ ಕೇವಲ ಸ್ಪಷ್ಟವಾದ ಹೇಳಿಕೆಗಳು ಕಾನೂನುಬದ್ಧವಾಗಿ ಸಮರ್ಥನೀಯ ಆರೋಪವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಅದು ಹೇಳಿತ್ತು, ಏಕೆಂದರೆ ತ್ರಿಪಾಠಿ ಕೇವಲ ಮತದಾರರ ಪಟ್ಟಿಯ ಸಾರವನ್ನು ಮಾತ್ರ ಅವಲಂಬಿಸಿದ್ದಾರೆ, ಅದು 1980 ರ ಪ್ರಮಾಣೀಕರಿಸದ ಮತದಾರರ ಪಟ್ಟಿಯ ಸಾರದ ಛಾಯಾಚಿತ್ರವಾಗಿತ್ತು ಎಂದು ಕೆಳ ನ್ಯಾಯಾಲಯವು ಅರ್ಜಿಯನ್ನು ತಿರಸ್ಕೃಸಿತ್ತು.
.
.
