Share this news

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಹಾಗೂ ಕೋಲಾರದಲ್ಲಿ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳು ಉಗ್ರರಿಗೆ ನೆರವು ನೀಡಿದ ಆರೋಪದಡಿ ಮೂವರು ಶಂಕಿತ ಉಗ್ರರಾದ ಪರಪ್ಪನ ಅಗ್ರಹಾರ ಜೈಲಿನ ಎಎಸೈ ಚಾಂದ್ ಪಾಷಾ, ಅನೀಸ್ ಫಾತಿಮಾ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ನಾಗರಾಜ್ ಎಂಬವರನ್ನು ಬಂಧಿಸಿದ್ದಾರೆ. ಬಂಧಿತರ ಶಂಕಿತ ಉಗ್ರರನ್ನು ತೀವೃ ವಿಚಾರಣೆಗೆ ಒಳಪಡಿಸಿದ ಅಧಿಕಾರಿಗಳು ಬುಧವಾರ ಎನ್‌ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದು, ಕೋರ್ಟ್ ಎಲ್ಲಾ ಶಂಕಿತ ಉಗ್ರರನ್ನು ಜು.14ರವರೆಗೆ ಎನ್‌ಐಎ ಅಧಿಕಾರಿಗಳ ಕಸ್ಟಡಿಗೆ ನೀಡಿ ಆದೇಶಿಸಿದೆ.

ಇವರೆಲ್ಲರೂ ದಕ್ಷಿಣ ಭಾರತದ ಹಲವು ಸ್ಫೋಟಗಳ ಮಾಸ್ಟರ್‌ಮೈಂಡ್ ನಾಸೀರ್ ಜೊತೆ ಸಂಪರ್ಕ ಹೊಂದಿದ್ದರು ಎನ್ನುವ ಮಹತ್ವದ ಸುಳಿವು ಸಿಕ್ಕಿದ್ದು, ಈ ಸಂಬAಧ ಎನ್‌ಐಎ ಅಧಿಕಾರಿಗಳು ಮುಂದಿನ 6 ದಿನಗಳ ಕಾಲ ವಿಚಾರಣೆ ತೀವ್ರಗೊಳಿಸಲಿದ್ದಾರೆ.
ಉಗ್ರ ನಾಸೀರ್, ಕೊಲೆ ಕೇಸ್‌ನಲ್ಲಿ ಶಾಮೀಲಾಗಿದ್ದ ಯುವಕರ ತಂಡ ಕಟ್ಟಿದ್ದ. ಜುನೈದ್, ಮೊಹಮ್ಮದ್ ಹರ್ಷದ್ ಖಾನ್, ಸುಹೈಲ್, ಫೈಜಲ್, ಜಾಹಿದ್ ತಬ್ರೇಜ್, ಮುದಾಸಿರ್ ಇರುವ ತಂಡ ರೆಡಿ ಮಾಡಿದ್ದ. ಈ ತಂಡ ಗ್ರೆನೇಡ್, ಪಿಸ್ತೂಲ್, ಸ್ಫೋಟಕ ವಸ್ತುಗಳ ಸಮೇತ ಬೆಂಗಳೂರಿನ ಆರ್.ಟಿ.ನಗರ, ಹೆಬ್ಬಾಳದಲ್ಲಿ ಸಿಕ್ಕಿ ಬಿದ್ದಿತ್ತು. ಇದೀಗ ಪ್ರಮುಖ ಆರೋಪಿ ಜುನೈದ್‌ಗಾಗಿ ಎನ್‌ಐಎ ಹುಡುಕಾಟ ನಡೆಸುತ್ತಿದ್ದು, ಈತನ ಮೇಲೆ ದಾಳಿ ನಡೆಸಿದಾಗ ಡಾ. ನಾಗರಾಜ್, ಚಾಂದ್ ಪಾಷಾ ಹಾಗೂ ಅನೀಸ್ ಫಾತೀಮಾ ಸಿಕ್ಕಿಬಿದ್ದಿದ್ದಾರೆ.

 

 

Leave a Reply

Your email address will not be published. Required fields are marked *