ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬAಧಿಸಿದAತೆ ಓರ್ವ ಆರೋಪಿಯನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಸೈಯದ್ ನಸ್ರು (30) ಬಂಧಿತ ಆರೋಪಿ.
ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಹಸುಗಳನ್ನು ಸಾಕುತ್ತಿದ್ದು, ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು. ಕೃತ್ಯಕ್ಕೆ ಸಂಬAಧಿಸಿದAತೆ ಕರ್ಣ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ಕಾರ್ಯಾಚರಣೆ ನಡೆಸಿ ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.
ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್‌ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಘಟನೆಯನ್ನು ಖಂಡಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ವಿಪಕ್ಷ ನಾಯಕ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.
ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಕಬ್ಜಾ ಮಾಡಲು ಮುಂದಾಗಿದ್ದರು. ಈ ವೇಳೆ ನಾನು ಮತ್ತು ಸುತ್ತಮುತ್ತಲಿನ ಹಸುಗಳ ಮಾಲೀಕರು ಹಸುಗಳೊಂದಿಗೆ ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿದ್ವಿ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಹಸುಗಳ ಮಾಲೀಕ ಕರ್ಣ ಆರೋಪಿಸಿದ್ದಾರೆ.