ಕಾರ್ಕಳ: ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರ ಬೆಳೆಯಬೇಕಾದರೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯದ ಅಧ್ಯಯನ ನಡೆಸಬೇಕು. ಹಿರಿಯರ ಜೀವನ ದರ್ಶನವನ್ನು ಅನುಸರಿಸಬೇಕು. ಆಗ ಬದುಕಿನ ಹೊಸತನಗಳು ತೆರೆದುಕೊಳ್ಳುತ್ತವೆ. ಜೀವನವನ್ನು ಧೈರ್ಯದಿಂದ ಎದುರಿಸುವ ದೃಢತೆ ನಮ್ಮಲ್ಲಿ ಉಂಟಾಗುತ್ತದೆ. ಶಿಕ್ಷಣವಂತ ಸಮಾಜವು ದೇಶದ ಉನ್ನತಿಗೆ ಕಾರಣೀಕರ್ತವಾಗುತ್ತದೆ. ಯುವ ಸಮುದಾಯ ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ಘಟಕದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಹೇಳಿದರು.
ಅವರು ಕಾರ್ಕಳದ ಕಾಲೇಜಿನಲ್ಲಿ ಕ್ರಿಯೇಟಿವ್ ನಿನಾದ ಸಂಚಿಕೆ-6 ನ್ನು ಬಿಡುಗಡೆಗೊಳಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ನೈಋತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್ ಭೋಜೆಗೌಡ ಉಪಸ್ಥಿತರಿದ್ದು ಸಮಾಜಕ್ಕೆ ಮಾರ್ಗದರ್ಶನ ನೀಡುವ ಶಿಕ್ಷಣದ ಪಠ್ಯಕ್ರಮ ರಚನೆಯಾಗಿ, ಮೌಲ್ಯಗಳನ್ನು ಅಳವಡಿಸುವಂತಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಕ.ಸಾ.ಪ.ದ ವಿವಿಧ ಪದಾಧಿಕಾರಿಗಳು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಅಶ್ವತ್ ಎಸ್.ಎಲ್. , ಅಮೃತ್ ರೈ, ಗಣಪತಿ ಭಟ್ ಕೆ.ಎಸ್, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.