ಕಾರ್ಕಳ: ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯು ಸೆಪ್ಟೆಂಬರ್ 15 ರಂದು ಎನ್.ಎಂ.ಎ.ಎಂ.ಐ.ಟಿ. ನಿಟ್ಟೆಯಲ್ಲಿ ಜರುಗಿದ್ದು, ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಮುಂಬರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.