ಬೆಂಗಳೂರು: ರಾಜ್ಯ ಸರ್ಕಾರ ಶೀಘ್ರದಲ್ಲೇ ಸೈಬರ್ ಭದ್ರತಾ ನೀತಿಯನ್ನು ಜಾರಿಗೆ ತರಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ
ಸರ್ಕಾರಿ ಇಲಾಖೆಗಳು ತಮ್ಮ ಸೇವೆಗಳನ್ನು ಸಾರ್ವಜನಿಕರಿಗೆ ಸುಲಭವಾಗಿ ಒದಗಿಸಲು ಡಿಜಿಟಲೀಕರಣಗೊಳ್ಳುತ್ತಿವೆ. ಸೇವಾ ಸಿಂಧು ಮೊಬೈಲ್ ಬ್ಯಾಂಕಿAಗ್ ಮತ್ತು ವರ್ಚುವಲ್ ತರಗತಿಗಳು ಸೇರಿದಂತೆ ವಿವಿಧ ಡಿಜಿಟಲ್ ಸೇವೆಗಳನ್ನು ಅಳವಡಿಸಿಕೊಂಡಿದ್ದಾರೆ. ಡಿಜಿಟಲ್ ಸೇವೆಗಳನ್ನು ಅಳವಡಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೈಬರ್ ಸುರಕ್ಷತೆ ಮತ್ತು ಭದ್ರತೆಯ ಮೇಲೆ ಗಮನಹರಿಸುವುದು ಮುಖ್ಯವಾಗಿದೆ ಎಂದರು.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.
ಡೀಪ್‌ಫೇಕ್, ಅಕ್ರಮ ಹಣ ವರ್ಗಾವಣೆ, ಆನ್‌ಲೈನ್ ಬ್ಯಾಂಕಿAಗ್, ಲೋನ್ ಆ್ಯಪ್ ವಂಚನೆ ಮತ್ತು ಇತರ ಪ್ರಕರಣಗಳು ಹೆಚ್ಚುತ್ತಿವೆ. ಗಂಭೀರ ಪ್ರಕರಣಗಳಲ್ಲಿ ವಿದೇಶಿ ಕಂಪನಿಗಳ ನೆರವು ಸಿಗದಿದ್ದರೆ ತನಿಖೆ ಕಷ್ಟವಾಗುತ್ತದೆ. ಸೈಬರ್ ಕ್ರೈಮ್ ಜಾಗತಿಕ ಸವಾಲು ಮತ್ತು ಸಮಸ್ಯೆಯಾಗಿದೆ. ಸೈಬರ್ ಅಪರಾಧವನ್ನು ತಡೆಯಲು ಅನೇಕ ಕಂಪನಿಗಳು ಸಂಶೋಧನೆಯನ್ನು ಪ್ರಾರಂಭಿಸಿವೆ. ಸೈಬರ್ ಅಪರಾಧಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಸೈಬರ್ ಅಪರಾಧ ವಿಭಾಗವನ್ನು ಬಲಪಡಿಸಲು ರಾಜ್ಯ ಸರ್ಕಾರ ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ ಮತ್ತು ಕ್ಲೌಡ್ ಕಂಪ್ಯೂಟಿAಗ್‌ನೊAದಿಗೆ ವ್ಯವಹರಿಸುವ ಕಂಪನಿಗಳಿAದ ಸಹಾಯವನ್ನು ಪಡೆಯಲಿದೆ. ಸೈಬರ್ ಕ್ರೈಂ ಕಡಿಮೆ ಮಾಡುವ ಮತ್ತು ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಸಿಐಡಿ ಕಚೇರಿಯಲ್ಲಿ ಸ್ಥಾಪಿಸಲಾದ ಸೈಬರ್ ಅಪರಾಧ ತನಿಖಾ ತರಬೇತಿ ಮತ್ತು ಸಂಶೋಧನೆಯಲ್ಲಿ ತರಬೇತಿ ಕಾರ್ಯಕ್ರಮಗಳಿಂದ ಪೊಲೀಸ್, ನ್ಯಾಯಾಂಗ ಮತ್ತು ಭಾರತೀಯ ರಕ್ಷಣಾ ಪಡೆಗಳ 33,000 ಕ್ಕೂ ಹೆಚ್ಚು ಸಿಬ್ಬಂದಿ ಪ್ರಯೋಜನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.




