Share this news

ಕಾರ್ಕಳ: ಕಾರ್ಕಳ ತಾಲೂಕಿನ ಶಿರ್ಲಾಲು ನಾಲ್ಕೂರು ನರಸಿಂಗೆ ರಾವ್ ಸ್ಮಾರಕ ಸರ್ಕಾರಿ ಪದವಿಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭವು ಡಿ.05ರಿಂದ 07ರವರೆಗೆ ನಡೆಯಲಿದೆ. ರಜತ ಮಹೋತ್ಸವದ ಅಂಗವಾಗಿ ಸುಮಾರು 57 ಲಕ್ಷ ರೂ ವೆಚ್ಚದ ಯೋಜನೆ ಹಾಕಿಕೊಂಡಿದ್ದು, ಶಾಲಾ ಆವರಣ ಗೋಡೆ, ಶಾಲಾ ಕಟ್ಟಡಗಳ ದುರಸ್ತಿ, ಸಭಾಂಗಣದ ದುರಸ್ತಿ ಸೇರಿದಂತೆ ಸಾಕಷ್ಟು ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರೊ.ಗುಣಪಾಲ ಕಡಂಬ ಹೇಳಿದರು.
ಅವರು ನ.11 ರಂದು ಶಿರ್ಲಾಲು ಕಾಲೇಜಿನಲ್ಲಿ ರಜತ ಮಹೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿ, ತೀರಾ ಗ್ರಾಮೀಣ ಭಾಗವಾದ ಬೈದರ್ಲಕಜೆ ಎಂಬಲ್ಲಿ ನಾಲ್ಕೂರು ನರಸಿಂಗೆ ರಾವ್ ಹಾಗೂ ಅವರ ಕುಟುಂಬದ ಸಹಕಾರದೊಂದಿಗೆ ಆರಂಭಗೊAಡ ಶಿರ್ಲಾಲು ಸರ್ಕಾರಿ ಪದವಿಪೂರ್ವ ಕಾಲೇಜು 25 ವರ್ಷಗಳನ್ನು ಪೂರೈಸಿ ರಜಮಹೋತ್ಸವ ಆಚರಣೆಯ ಸಂಭ್ರಮದಲ್ಲಿದೆ ಎಂದರು. ಕೆರ್ವಾಶೆ, ಜಾರ್ಕಳ-ಮುಂಡ್ಲಿ, ಶಿರ್ಲಾಲು, ಅಂಡಾರು ಗ್ರಾಮಗಳನ್ನೊಳಗೊಂಡ ಈ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಶಾಸಕ ಸುನಿಲ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಲಾ 5 ಲಕ್ಷ ಅನುದಾನ ಬಿಡುಗಡೆಯಾಗಿದೆ ಹಾಗೂ ದಾನಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಸಹಕಾರದಿಂದ ರಜತ ಮಹೋತ್ಸವ ಸಮಾರಂಭ ನಡೆಸಲಾಗುವುದು ಎಂದರು.
ರಜತ ಮಹೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪ್ರೌಢಶಾಲೆ ರಚನಾ ಸಮಿತಿ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಗೋಪಾಲ ನಾಯ್ಕ್ ಬಿಡುಗಡೆಗೊಳಿಸಿ ಶಾಲೆ ನಡೆದು ಬಂದ ಹೆಜ್ಜೆ ಗುರುತುಗಳನ್ನು ಸ್ಥೂಲವಾಗಿ ವಿವರಿಸಿದರು.
ಈ ಸಂದರ್ಭದಲ್ಲಿ ರಜತ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಶಾಂತಿರಾಜ್ ಜೈನ್, ಪ್ರೌಢಶಾಲೆ ಸ್ಥಾಪನಾ ಸಮಿತಿಯ ಅಧ್ಯಕ್ಷ ಗೋಪಾಲ ನಾಯ್ಕ್, ಪ್ರಾಂಶುಪಾಲ ಬೇಬಿ.ಕೆ ಈಶ್ವರಮಂಗಲ, ಪ್ರೌಢಶಾಲಾ ಮುಖ್ಯ ಶಿಕ್ಷಕ ನರಸಿಂಹ ನಾಯಕ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶೀತಲ್ ಜೈನ್, ರಜತ ಮಹೋತ್ಸವ ಸಮಿತಿಯ ಕೋಶಾಧಿಕಾರಿ ಸಂದೀಪ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *