ಬೆಂಗಳೂರು: ಕೋಮು ಸಂಘರ್ಷದಿಂದ ಬೆಂದಿರುವ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಖಡಕ್ ಅಧಿಕಾರಿಗಳ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅನುಪಮ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಿದ್ದು, ನೂತನ ಆಯುಕ್ತರಾಗಿ 2010ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಿಸಲಾಗಿದೆ.
ಉಡುಪಿ ಎಸ್ಪಿಯಾಗಿರುವ 2014ರ ಐಪಿಎಸ್ ಅಧಿಕಾರಿ ಡಾ.ಕೆ ಅರುಣ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಿದೆ. ಹಾಲಿ ಎಸ್ ಪಿ ಯತೀಶ್ ಎನ್ ಅವರನ್ನು ವರ್ಗಾವಣೆ ಮಾಡಿದೆ.
ಗುಪ್ತಚರ ಇಲಾಖೆಯ ಎಸ್ಪಿಯಾಗಿದ್ದ ಹರಿರಾಮ್ ಶಂಕರ್ ಅವರನ್ನು ಉಡುಪಿ ಎಸ್ಪಿಯಾಗಿ ನೇಮಕ ಮಾಡಿದೆ.