Share this news

ಕಾರ್ಕಳ, ಫೆ.13:ಕಾರ್ಕಳ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮುದಾಯದ ಕುಂದು ಕೊರತೆಗಳ ಕುರಿತು ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದ್ದ ಸಭೆಗೆ ಇಲಾಖಾಧಿಕಾರಿಗಳು ಚಕ್ಕರ್ ಹೊಡೆದ ಪರಿಣಾಮವಾಗಿ ದಲಿತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸಭೆಯನ್ನೇ ಬಹಿಷ್ಕರಿಸಿ ಹೊರ ನಡೆದ ಘಟನೆ ನಡೆದಿದೆ.

ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತದ ವತಿಯಿಂದ ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಫೆ.13ರಂದು ಶುಕ್ರವಾರ ಆಯೋಜಿಸಲಾಗಿದ್ದ ಕುಂದುಕೊರತೆ ಸಭೆಯನ್ನು ಯಶಸ್ವಿಗೊಳಿಸಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಎಲ್ಲಾ ಸಿದ್ಧತೆ ನಡೆಸಿದ್ದರು. ಕುಂದು ಕೊರತೆ ಸಭೆಗೆ ಒಟ್ಟು 44 ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ಎಲ್ಲರಿಗೂ ಪತ್ರದ ಮೂಲಕ ತಿಳಿಸಲಾಗಿತ್ತು. ಆದರೆ ಈ ಸಭೆಗೆ ಪ್ರಮುಖವಾಗಿ ಕಾರ್ಕಳ ಪುರಸಭೆಯ ಮುಖ್ಯಾಧಿಕಾರಿ ಬಾರದೇ ಇದ್ದಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಯಿತು.

ತಹಶೀಲ್ದಾರ್ ಪ್ರದೀಪ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಸಭೆಗೆ ತಾಲೂಕು ಪಂಚಾಯತ್ ಕಾರ್ಯನಿರ್ವಹಾಧಿಕಾರಿ ಬಾರದೇ ಇದ್ದಾಗ ಇದರಿಂದ ಪರಿಶಿಷ್ಟ ಸಮುದಾಯದ ಮುಖಂಡರಾದ ಶ್ರೀನಿವಾಸ ಕಾರ್ಲ, ಮಲೆಕುಡಿಯ ಸಮುದಾಯದ ಶ್ರೀಧರ್ ಗೌಡ, ಅಶೋಕ್ ಸಾಣೂರು ಮುಂತಾದವರು ಇಲಾಖೆಯ ಅಧಿಕಾರಿಗಳು ಸಭೆಗೆ ಬರುವುದಿಲ್ಲವಾದರೆ ಯಾಕಾಗಿ ಸಭೆ ನಡೆಸುತ್ತೀರಿ, ಇದರಿಂದ ಸಮಸ್ಯೆಗಳಿಗೆ ಪರಿಹಾರ ಸಾಧ್ಯವೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅನ್ಯ ಕಾರ್ಯದ ನಿಮಿತ್ತ ತಾಲೂಕು ಪಂಚಾಯತ್ ಕಾರ್ಯನಿರ್ವಹಾಧಿಕಾರಿಯವರು ಹೊರಗಡೆ ಹೋಗಿದ್ದು ಅವರು ಸಭೆಗೆ ಹಾಜರಾಗುತ್ತಾರೆ ಎಂದು ತಹಶೀಲ್ದಾರ್ ಸ್ಪಷ್ಟನೆ ನೀಡಿದರು. ಇದಕ್ಕೆ ತೃಪ್ತರಾಗದ ದಲಿತ ನಾಯಕರು ಇದು ಪೂರ್ವನಿರ್ಧರಿತ ಸಭೆಯಾಗಿದ್ದು, ಸಭೆ ನಡೆಸಬೇಕಿದ್ದ ಇಓ ಅವರೇ ಗೈರಾದರೆ ಹೇಗೆ? ಇದಲ್ಲದೇ ಪುರಸಭೆ ಮುಖ್ಯಾಧಿಕಾರಿ ಕೂಡ ಬಂದಿಲ್ಲ, ಅಧಿಕಾರಿಗಳಿಗೆ ದಲಿತರ ಕುಂದುಕೊರತೆ ಸಭೆ ನಡೆಸುವುದೇ ಬೇಕಾಗಿಲ್ಲ, ಇದೊಂದು ಕಾಟಾಚಾರದ ಸಭೆಯಾಗಿದೆ, ಆದ್ದರಿಂದ ಈ ಸಭೆಯನ್ನು ನಡೆಸಲು ಸಾಧ್ಯವಿಲ್ಲ ಎಂದು ಬಹಿಷ್ಕರಿಸಿ ಸಭೆಯಿಂದ ಹೊರನಡೆದರು.

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *