ನವದೆಹಲಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಿಸಲಾಗಿದೆ. ಚೆನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.13ರಂದು ಮತದಾನ ನಡೆಯಲಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಇಂದು (ಅಕ್ಟೋಬರ್ 15) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು. ಇದೇ ವೇಳೆ ಕರ್ನಾಟಕದ ಶಿಗ್ಗಾಂವಿ(ಹಾವೇರಿ), ಚನ್ನಪಟ್ಟಣ)ರಾಮನಗರ) ಮತ್ತು ಸಂಡೂರು(ಬಳ್ಳಾರಿ ಜಿಲ್ಲೆ) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ್ದು, ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನು ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಆಯ್ಕೆಯಾದ ಬಳಿಕ ತೆರವಾದಂತ ಚೆನ್ನಪಟ್ಟಣ, ಸಂಸದರಾದ ಬಳಿಕ ಬೊಮ್ಮಾಯಿ ಅವರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಿಂದ ತೆರವಾದ ಸ್ಥಾನಕ್ಕೆ ಹಾಗೂ ಈ.ತುಕಾರಾಂ ಅವರ ಸಂಡೂರು ಕ್ಷೇತ್ರಕ್ಕೆ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.




























