Share this news

ಉಡುಪಿ: ಗುರುಡ ಗ್ಯಾಂಗ್’ನ ಕುಖ್ಯಾತ ರೌಡಿಶೀಟರ್ ಕಾರ್ಕಳ ತಾಲೂಕಿನ ಕೌಡೂರು ಕಂಪಾನು ನಿವಾಸಿ ಕಬೀರ್ ಅಲಿಯಾಸ್ ಕಬೀರ್ ಹುಸೇನ್ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದು,ಪೊಲೀಸರು ಈತನನ್ನು ಬಂಧಿಸಿ ಮೈಸೂರು ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದಾರೆ.

ಕುಖ್ಯಾತ ಗರುಡ ಗ್ಯಾಂಗ್‌ನ ಸಕ್ರೀಯ ಸದಸ್ಯ ಕಬೀರ್, ಕಳೆದ 2005ರಿಂದ ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಕಳ್ಳತನ, ಜಾನುವಾರು ಕಳವು, ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮುಂತಾದ 17 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಇವುಗಳ ಪೈಕಿ ಈಗಾಗಲೇ ಎರಡು ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸಿದ್ದು, 8 ಪ್ರಕರಣಗಳಲ್ಲಿ ಖುಲಾಸೆ ಹೊಂದಿರುತ್ತಾನೆ. ಮೂರು ಪ್ರಕರಣಗಳಲ್ಲಿ ರಾಜಿ ಮಾಡಿಕೊಂಡಿದ್ದು, ಎರಡು ಪ್ರಕರಣಗಳು ನ್ಯಾಯಾಲಯ ವಿಚಾರಣೆಯಲ್ಲಿವೆ. ಉಳಿದ ಎರಡು ಪ್ರಕರಣಗಳು ಪೊಲೀಸ್‌ ತನಿಖೆಯಲ್ಲಿವೆ.

ಈತನ‌ ವಿರುದ್ಧ ಕಾರ್ಕಳ ನಗರ, ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಶಿರ್ವ, ಕಾಪು ಠಾಣೆಗಳ ಪ್ರಕರಣ ದಾಖಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಮಾತ್ರವಲ್ಲದೇ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಕೊಪ್ಪ, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು, ಮಂಗಳೂರು ನಗರ ವ್ಯಾಪ್ತಿಯ ಸುರತ್ಕಲ್ ಠಾಣೆಯ ಪ್ರಕರಣಗಳಲ್ಲೂ ಭಾಗಿಯಾಗಿದ್ದಾನೆ. ಈತ ಗರುಡ ಗ್ಯಾಂಗ್‌ನ ಸಕ್ರಿಯ ಸದಸ್ಯನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ

 

 

Leave a Reply

Your email address will not be published. Required fields are marked *