Share this news

 

 

 

ಮೈಸೂರು,ಜ.17: ಇತ್ತೀಚೆಗಷ್ಟೆ ಶಿಡ್ಲಘಟ್ಟದಲ್ಲಿ ಮಹಿಳಾ ಪೌರಾಯುಕ್ತೆ ಅಮೃತಾ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ ಗೌಡ ಎಂಬಾತ ಧಮ್ಕಿ ಹಾಕಿದ ಘಟನೆ ಮಾಸುವ ಮುನ್ನವೇ ಇದೀಗ ಸಿಎಂ ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ ಹಾಕಲಾಗಿದೆ.
ಮೈಸೂರು ತಾಲೂಕು ಗುಡಮಾದನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಜಿಎಂ ಪುಟ್ಟಸ್ವಾಮಿ ಎಂಬಾತ ಗ್ರಾಮ ಆಡಳಿತಾಧಿಕಾರಿಗೆ ಬೆದರಿಕೆ ಹಾಕಿದ್ದು, ಈ ಸಂಬಂಧ ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಡೀಪಾಳ್ಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಜಿ.ಭವ್ಯ, ಗ್ರಾಮ ಸಹಾಯಕ ನವೀನ್ ಕುಮಾರ್‌ ಅವರಿಗೆ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ‌. ಕೊಲೆ ಬೆದರಿಕೆ ಹಾಕಿದ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಮಾದರಿಯ ಆಸ್ಪತ್ರೆ ನಿರ್ಮಾಣ ಮಾಡಲು ಒಟ್ಟು 20 ಎಕರೆ ಸರ್ಕಾರಿ ಜಾಗ ಮೀಸಲಿಡಲಾಗಿದೆ. ಇದು ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾಗಿದೆ. ತಮ್ಮ ಸ್ವಕ್ಷೇತ್ರದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಸಿದ್ದರಾಮಯ್ಯ ಆಸಕ್ತಿ ತೋರಿದ್ದಾರೆ. ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಗುರುತಿಸಿ, ಭೂ ಸ್ವಾಧೀನ ಪ್ರಕ್ರಿಯೆಗೆ ಮಹಿಳಾ ಅಧಿಕಾರಿ ಜಿ.ಭವ್ಯ ಹಾಗೂ ನವೀನ್ ಕುಮಾರ್ ತೆರಳಿದ್ದರು. ಈ ವೇಳೆ ಜಮೀನಿನಲ್ಲಿ ಅನಧಿಕೃತವಾಗಿ ಅಡಿಕೆ ತೋಟ ನಿರ್ಮಿಸಿಕೊಂಡಿದ್ದ ಪುಟ್ಟಸ್ವಾಮಿ, ಯಾರನ್ನು ಕೇಳಿ ನಿಮ್ಹಾನ್ಸ್ ಆಸ್ಪತ್ರೆಗೆ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ತಹಸೀಲ್ದಾರ್ ತಲೆ ತೆಗೆಯಬೇಕು, ನಿನ್ನನ್ನು ಇಲ್ಲಿಯೇ ಕೊಂದು ಹಾಕುತ್ತೇನೆ ಎಂದು ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಪುಟ್ಟಸ್ವಾಮಿಯ ದೌರ್ಜನ್ಯ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ಗ್ರಾಮ ಸಹಾಯಕ ನವೀನ್ ಕುಮಾರ್‌ಗೂ ಬೆದರಿಕೆ ಹಾಕಿ, ಮೊಬೈಲ್ ಕಿತ್ತುಕೊಂಡು ವಿಡಿಯೋ ಡಿಲೀಟ್ ಮಾಡಿಸಿದ್ದಾನೆ. ಸರ್ಕಾರಿ ಕೆಲಸವನ್ನು ನಿರ್ಭಯವಾಗಿ ನಿರ್ವಹಿಸಲು ಮಹಿಳಾ ಸಿಬ್ಬಂದಿಯಾದ ನನಗೆ ಭಯದ ವಾತಾವರಣ ಉಂಟು ಮಾಡಿರುವ ಪುಟ್ಟಸ್ವಾಮಿ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ರಕ್ಷಣೆ ನೀಡಬೇಕು ಎಂದು ಭವ್ಯ ಅವರು ದೂರು ನೀಡಿದ್ದಾರೆ. ಈ ಕುರಿತು ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *