
ಕಾರ್ಕಳ, ಆ.04: ಪರಿಸರ ಸೂಕ್ಷ್ಮ ವಲಯ ಘೋಷಣೆಯಿಂದ ಪಶ್ಚಿಮ ಘಟ್ಟಪ್ರದೇಶ ವ್ಯಾಪ್ತಿಯಲ್ಲಿ ಜೀವನ ನಡೆಸುತ್ತಿರುವ ಜನರ ಬದುಕು ಮತ್ತಷ್ಟು ದುಸ್ತರವಾಗಲಿದೆ ಎಂದು ರಾಜ್ಯ ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಆತಂಕ ವ್ಯಕ್ತಪಡಿಸಿದ್ದಾರೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನದ ಘೋಷಣೆಯಾದ ದಿನದಿಂದ ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳಿಗೆ ದೊಡ್ಡಮಟ್ಟದ ಹಿನ್ನಡೆಯಾಗಿದ್ದು, ಇದರಿಂದ ಅರಣ್ಯದ ಅಂಚಿನಲ್ಲಿ ವಾಸಿಸುವ ಜನ ಇದರ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಮತ್ತೆ ಗಾಯದ ಮೇಲೆ ಬರೆ ಎಂಬAತೆ ಪಶ್ಚಿಮ ಘಟ್ಟ ಪ್ರದೇಶ ವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲು ಮುಂದಾಗಿರುವುದು ಈ ಭಾಗದ ಜನರಲ್ಲಿ ಆತಂಕ ಉಂಟಾಗಿದೆ. ಈ ಯೋಜನೆ ವಿರೋಧಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಆದಷ್ಟು ಬೇಗ ಜನರ ಬದುಕಿಗೆ ತೊಂದರೆಯಾಗದAತೆ ಹಾಗೂ ಜನ ಬೀದಿಗಿಳಿದು ಹೋರಾಟ ಮಾಡುವ ಮುನ್ನ ಎಚ್ಚೆತ್ತು ಯೋಜನೆಯ ಕುರಿತು ವಿರೋಧದ ನಿರ್ಣಯವನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಬೇಕು ಎಂದು ಶ್ರೀಧರ ಗೌಡ ಒತ್ತಾಯಿಸಿದ್ದಾರೆ.
ಈ ಹಿಂದೆ ಕುದುರೆಮುಖ ರಾಷ್ಟ್ರೀಯ ಉದ್ಯಾನ ಘೋಷಣೆಯಾದಾಗ ಜನನಿ ಬಿಡ ಪ್ರದೇಶವನ್ನು ಯೋಜನೆಯಿಂದ ವಿರಹಿತಗೊಳಿಸಬೇಕೆಂದು ಜನರ ಅಭಿಪ್ರಾಯವಿತ್ತು. ಆದರೆ ಅದಕ್ಕೆ ಮನ್ನಣೆ ಸಿಗಲಿಲ್ಲ ಇಂಥ ಘೋಷಣೆಗಳು ಜನವಸತಿ ಪ್ರದೇಶವನ್ನು ವಿರಹಿತಪಡಿಸಿ ಆಗಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ ಮೂಲ ಬುಡಕಟ್ಟು ಒಕ್ಕೂಟದ ಕೋರ್ ಕಮಿಟಿ ಸದಸ್ಯ ಹಾಗೂ ರಾಜ್ಯ ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು ಒತ್ತಾಯಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
