
ಕಾರ್ಕಳ, ಜು.29: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕುರಿತು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾನಹಾನಿಕರ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಕಾರ್ಕಳ ಯುವ ಕಾಂಗ್ರೆಸ್ ವತಿಯಿಂದ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕುರಿತು ಯಾವುದೇ ಪುರಾವೆ ಇಲ್ಲದೆ 24 ಗಂಟೆಗಳ ಕಾಲ ನಶೆಯಲ್ಲಿ ಇರುತ್ತಾರೆ ಎಂದು ನಿರಾಧಾರ ಹಾಗೂ ಮಾನಹಾನಿಕರ ಆರೋಪ ಮಾಡಿ ರಾಹುಲ್ ಗಾಂಧಿ ಅವರ ವಂಶವನ್ನು ಧ್ವಂಸ ಮಾಡುತ್ತೇವೆ ಎಂಬ ಬೆದರಿಕೆಯ ಹೇಳಿಕೆಯನ್ನು ನೀಡಿ ಸಮಾಜದಲ್ಲಿ ದ್ವೇಷ ಉದ್ವಿಗ್ನತೆ ಮತ್ತು ಅಶಾಂತಿಯನ್ನು ಸೃಷ್ಟಿಸಿ ಕಾನೂನು ಸುವಸ್ಥೆಗೆ ಧಕ್ಕೆ ತರುವ ಕೆಲಸವನ್ನು ಶಾಸಕರು ಮಾಡಿದ್ದು ಇದನ್ನು ಖಂಡಿಸಿ ಕಾರ್ಕಳ ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದಾರೆ.




.
.
.
.
.
.
.
.
.
.
.
.
.
.
.
.
.
.
.
.
