Share this news

ನವದೆಹಲಿ: ಭಾರೀ ಮಳೆಯ ಮಧ್ಯೆ ಶುಕ್ರವಾರ ಬೆಳ್ಳಂಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗ ಕೆಳಗೆ ಸಂಚರಿಸುತ್ತಿದ್ದ ಟ್ಯಾಕ್ಸಿಗಳು ಹಾಗೂ ಕಾರುಗಳ ಮೇಲೆ ಇದ್ದಕ್ಕಿದ್ದಂತೆ ಕುಸಿದುಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (DFS) ಅಧಿಕಾರಿಗಳು ತಿಳಿಸಿದ್ದಾರೆ.

ಹಾನಿಗೊಳಗಾದ ವಾಹನಗಳಲ್ಲಿ ಯಾರಾದರೂ ಸಿಲುಕಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ . ಮೇಲ್ಛಾವಣಿಯ ಶೀಟ್‌ನ ಹೊರತಾಗಿ, ಸಪೋರ್ಟ್ ಬೀಮ್ ಗಳು ಸಹ ಕುಸಿದಿದ್ದು, ಟರ್ಮಿನಲ್‌ನ ಪಿಕ್-ಅಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌ 1 ರ ಛಾವಣಿ ಕುಸಿತದ ಘಟನೆಯನ್ನು ನಾನು ವೈಯಕ್ತಿಕವಾಗಿ ಗಮನಿಸುತ್ತಿದ್ದೇನೆ. ದೆಹಲಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಘಟನಾ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ T1 ನಲ್ಲಿ ಎಲ್ಲಾ ಸಂತ್ರಸ್ತ ಪ್ರಯಾಣಿಕರಿಗೆ ಸಹಾಯ ಮಾಡಲು ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ” ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

 

 

                        

                          

 

 

 

 

 

                        

                          

 

 

 

 

Leave a Reply

Your email address will not be published. Required fields are marked *