ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ.
50 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 19 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ. ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಮತ್ತು ಸಿಎಂ ಆತಿಶಿ ಹಿನ್ನಡೆ ಸಾಧಿಸಿದ್ದಾರೆ. ದೆಹಲಿ ಅಬಕಾರಿ ಹಗರಣದಲ್ಲಿ ಜೈಲುಪಾಲಾಗಿದ್ದ ಮೂವರು ನಾಯಕರಿಗೆ ತೀವ್ರ ಹಿನ್ನಡೆಯಾಗಿದೆ. ಆಪ್ ಸಂಸ್ಥಾಪಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮೂವರು ನಾಯಕರೂ ಹಿನ್ನಡೆಯಲ್ಲಿದ್ದಾರೆ.
ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿAದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ ದೆಹಲಿಯಲ್ಲಿ 668 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ, 95 ತೃತೀಯ ಲಿಂಗದ ಅಭ್ಯರ್ಥಿಗಳು ಸಹ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಇಂದು ಮತ ಎಣಿಕೆಯ ನಂತರ 699 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.