ನವದೆಹಲಿ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ED ಅಧಿಕಾರಿಗಳು ಬಂಧಿಸಿದ್ದು, ಶುಕ್ರವಾರ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಪ್ರಕರಣಕ್ಕೆ ಕುರಿತಂತೆ ಕೋರ್ಟ್ ಕೇಜ್ರಿವಾಲ್ ಅವರನ್ನು 06 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ ಆದೇಶ ಹೊರಡಿಸಿತು.
ಮದ್ಯ ಮಾರಾಟ ಪ್ರಕರಣದ ಕುರಿತ ಹೆಚ್ಚಿನ ವಿಚಾರಣೆಗೆ ಅರವಿಂದ್ ಕೇಜ್ರಿವಾಲ್ ಅವರನ್ನು 10 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡುವಂತೆ ಜ್ಯಾರಿ ನಿರ್ದೇಶನಾಲಯ ಮನವಿ ಮಾಡಿತ್ತು. ಆದರೆ ನ್ಯಾಯಾಲಯವು 6 ದಿನಗಳ ಕಸ್ಟಡಿ ನೀಡಿ ಆದೇಶಿಸಿದೆ.
ಕೇಜ್ರಿವಾಲ್ ಅವರು ಹಗರಣದ ಕಿಂಗ್ ಪಿನ್ ಎಂದು ರಾಜು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದು ಅವರು ನೀತಿಯ ಅನುಷ್ಠಾನದಲ್ಲಿ ನೇರವಾಗಿ ಭಾಗಿಯಾಗಿದ್ದರು ಮತ್ತು ದಕ್ಷಿಣ ಗುಂಪಿಗೆ ಅನುಕೂಲ ಮಾಡಿಕೊಟ್ಟರು ಎಂದಿದ್ದಾರೆ.
.


