Share this news

ಕಾರ್ಕಳ: ಕಡ್ತಲ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷೆಯ ಮೇಲೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಮೂಲಕ ಅವಹೇಳನಕಾರಿ ಹಾಗೂ ಮಾನಹಾನಿಕರ ಸಂದೇಶ ಪೋಸ್ಟ್ ಮಾಡಿರುವ ಬಗ್ಗೆ ಅಜೆಕಾರು ಠಾಣೆಯಲ್ಲಿ ದೂರು ದಾಖಲಾಗಿದ್ದು, ದಾಖಲಾಗಿರುವ ಆರೋಪಿಗಳ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿನಯ ಡಿ ಬಂಗೇರ ಆಗ್ರಹಿಸಿದ್ದಾರೆ.

ಕಳಪೆ ಕಾಮಗಾರಿಯ ಬಗ್ಗೆ ಸಂವಿಧಾನಾತ್ಮಕವಾಗಿ ಮಾಡಿರುವ ಪ್ರತಿಭಟನೆಯನ್ನು ಅರಗಿಸಲಾಗದ ಮನಸ್ಥಿತಿಯುಳ್ಳ ಕಾರ್ಕಳದ ಕಾಂಗ್ರೆಸ್ ನಾಯಕರುಗಳು, ಒಬ್ಬ ಮಹಿಳೆಯ ಬಗ್ಗೆ ಇಂತಹ ನೀಚ ಶಬ್ಧಗಳನ್ನು ಉಪಯೋಗಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂದೇಶಗಳನ್ನು ರವಾನಸುತ್ತಿರುವುದು ಕಾರ್ಕಳ ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರ ಬಗ್ಗೆ ಯಾವುದೇ ರೀತಿಯ ಗೌರವ ಇಲ್ಲ ಎಂಬುದು ಸ್ಪಷ್ಟವಾಗಿದೆ. ಇಂತಹ ಮಹಿಳಾ ವಿರೋಧಿ ಕಾಂಗ್ರೆಸ್‌ನ ನೀತಿಯನ್ನು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಖಂಡಿಸುತ್ತದೆ.

ಒAದು ಕಡೆ ಸರ್ಕಾರಗಳು ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೂ ಸರಿಸಮಾನ ಪ್ರಾತಿನಿಧ್ಯ ಸಿಗಬೇಕೆಂದು ಶೇಕಡಾ 50 ರಷ್ಟು ಮೀಸಲಾತಿ ನೀಡಿ ಪ್ರೋತ್ಸಾಹಿಸುತ್ತಿದ್ದರೆ, ಇನ್ನೊಂದು ಕಡೆ ನಮ್ಮ ದೇಶವನ್ನು ದೀರ್ಘಕಾಲ ಆಳಿರುವ ಕಾಂಗ್ರೆಸ್ ಪಕ್ಷ ಒಬ್ಬ ಮಹಿಳಾ ಜನಪ್ರತಿನಿಧಿಯನ್ನು ಹೀನಾಯವಾಗಿ ಬಿಂಬಿಸುತ್ತಾ ಮಹಿಳೆಯರ ಸ್ಥೈರ್ಯವನ್ನು
ಕುಗ್ಗಿಸುವ ಕೃತ್ಯ ಮಾಡುತ್ತಿದೆ. ಇದು ಮುಂದುವರಿದರೆ ಗೌರವಯುತ ಮಹಿಳೆಯರು ರಾಜಕೀಯ ಕ್ಷೇತ್ರಕ್ಕೆ ಕಾಲಿಡಲು ಹಿಂದು- ಮುಂದು ನೋಡುವ ಪರಿಸ್ಥಿತಿ ಎಲ್ಲಾ ಪಕ್ಷಗಳಿಗೂ ಎದುರಾಗಬಹುದು. ಕಾರ್ಕಳ ಕಾಂಗ್ರೆಸ್ ಈ ನಿಟ್ಟಿನಲ್ಲಿ ತನ್ನ ಬುದ್ಧಿಗೆಟ್ಟ ಕಾರ್ಯಕರ್ತರಿಗೆ ಮಹಿಳೆಯರ ಬಗ್ಗೆ ಗೌರವಯುತವಾಗಿ ವರ್ತಿಸುವ ಬಗ್ಗೆ ನೀತಿ ಪಾಠ ಹೇಳುವುದು ಒಳಿತು.

ಕಡ್ತಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರ ವಿರುದ್ಧ ಮಾನಹಾನಿಕರ ಪೋಸ್ಟ್ ಹಾಕಿ ಶೇರ್ ಮಾಡಿರುವ ಆರೋಪಿಗಳ ವಿರುದ್ಧ ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯದೇ, ತಕ್ಷಣ ಬಂಧಿಸಿ ಆರೋಪಿಗೆ ತಕ್ಕ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೆಜ್ಜೆ ಇಡಬೇಕು. ತನಿಖೆಯಲ್ಲಿ ವಿಳಂಬ ಆದರೆ ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಯಾವ ಹೋರಾಟಕ್ಕೂ ಸಿದ್ಧ. ನಮ್ಮ ತಾಳ್ಮೆಯನ್ನು ಪರೀಕ್ಷಿಸದೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಿ ಎಂದು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

                        

                          

                        

                          

 

`

Leave a Reply

Your email address will not be published. Required fields are marked *