Share this news

ಬೆಂಗಳೂರು : ಹುಬ್ಬಳ್ಳಿಯ ಅಂಜಲಿ ಅಂಬಿಗೇರ್ ಹತ್ಯೆ ಪ್ರಕರಣದ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಕರ್ತವ್ಯ ಲೋಪವೂ ಇತ್ತೆಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಲೋಪ ಇರುವುದು ಸ್ಪಷ್ಟವಾಗಿ ಕಂಡು ಬಂದಿದೆ. ಈಗಾಗಲೇ ಕರ್ತವ್ಯಲೋಪ ಎಸಗಿದ ಪೊಲೀಸ್​ ಇನ್ಸ್​ಪೆಕ್ಟರ್​ ಮತ್ತು ಮಹಿಳಾ ಹೆಡ್​​ಕಾನ್​ಸ್ಟೇಬಲ್​ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೊಮ್ಮಗಳಿಗೆ ಜೀವ ಬೆದರಿಕೆ ಇದೆ ಎಂದು ಮೃತ ಅಂಜಲಿಯ ಅಜ್ಜಿ ಪೊಲೀಸರಿಗೆ ದೂರು ಕೊಟ್ಟಿರಲಿಲ್ಲ. ಕೇವಲ ಮಾಹಿತಿ ನೀಡಿದ್ದರು. ಅಂಜಲಿ ಪೋಷಕರು ಪೊಲೀಸರಿಗೆ ಮೊದಲೇ ಮಾಹಿತಿ ನೀಡಿದ್ದೆವು ಎಂದು ತಿಳಿಸಿದ್ದಾರೆ. ಸದ್ಯ ಕೊಲೆ ಆರೋಪಿ ಗಿರೀಶ್ ಅಲಿಯಾಸ್ ವಿಶ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

 

 

 

                        

                          

 

Leave a Reply

Your email address will not be published. Required fields are marked *