ಕಾರ್ಕಳ, ಸೆ.17: ಪರಿಶಿಷ್ಟ ಪಂಗಡದಲ್ಲಿ ಈಗಾಗಲೇ ಸುಮಾರು 52 ವಿವಿಧ ಸಮುದಾಯಗಳಿದ್ದು ಸರಕಾರದ ವಿಭಿನ್ನ ನಿಲುವು , ಧೋರಣೆಗಳಿಂದ ನಿರೀಕ್ಷಿತ ಮಟ್ಟದಲ್ಲಿ ಇನ್ನೂ ಕೂಡ ಅಭಿವೃದ್ಧಿ ಹೊಂದಲು ಸಾಧ್ಯವಾಗಿಲ್ಲ, ಅದರಲ್ಲೂ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟು ಜನಾಂಗದ ಆರ್ಥಿಕ ,ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿ ತೀರಾ ಶೋಚನೀಯವಾಗಿದ್ದು ಇದೆಲ್ಲವನ್ನು ಸರಕಾರ ಸೂಕ್ಷ್ಮವಾಗಿ ಗಮನಿಸದೇ ಪದೇಪದೇ ಹೊಸ ಹೊಸ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಹುನ್ನಾರವನ್ನು ಮಾಡುತ್ತಲೇ ಬಂದಿದ್ದು ಸೇರ್ಪಡೆಯ ಪ್ರಮಾಣಕ್ಕೆ ಅನುಗುಣವಾಗಿ ಮೀಸಲಾತಿಯ ಪ್ರಮಾಣದಲ್ಲಿ ಹೆಚ್ಚಳ ಮಾಡುವ ಯೋಚನೆಯನ್ನು ಮಾಡದೇ ದ್ರೋಹವನ್ನು ಮಾಡಲಾಗಿದೆ.
ಪರಿಶಿಷ್ಟ ಪಂಗಡದ ಸೇರ್ಪಡೆಗೆ ಸಾಂವಿಧಾನಿಕವಾಗಿ ಕನಿಷ್ಠ ಮಾನದಂಡಗಳು ಇಲ್ಲದಿದ್ದರೂ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಲ್ಲಿ ಖುದ್ದು ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿ ಸಂವಿಧಾನದ ಆಶಯವನ್ನು ಗಾಳಿಗೆ ತೂರಿದ್ದಾರೆ ಎಂದು ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು ಆರೋಪಿಸಿದ್ದು,ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ