Share this news

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ವಿಡಿಯೋ ಒಂದಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಗಾಗಿ, ಬೆಳ್ತಂಗಡಿ ಪೊಲೀಸರು ಯೂಟ್ಯೂಬರ್ ಸಮೀರ್ ಅವರ ಬೆಂಗಳೂರಿನ ಮನೆಗೆ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದುಕೊಂಡು ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಅರೆಸ್ಟ್ ಮಾಡಲು ತೆರಳಿದ್ದಾಗ ಕಣ್ತಪ್ಪಿಸಿಕೊಂಡು ಮಂಗಳೂರು ಕೋರ್ಟ್​ ನಿಂದ ಜಾಮೀನು ಪಡೆದುಕೊಂಡು ಬಂಧನದಿಂದ ಪಾರಾಗಿದ್ದರು. ಆದ್ರೆ, ಇದೀಗ ಪೊಲೀಸರು ಸರ್ಚ್ ವಾರೆಂಟ್ ಪಡೆದು ಜಮೀರ್ ಮನೆಯಲ್ಲಿ ಶೋಧ ನಡೆಸಿದ್ದಾರೆ.

 ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಹಾಗೂ ಮೊಬೈಲ್ ಫೋನ್‌ಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಸಮೀ‌ರ್ ತನಿಖೆ ವೇಳೆ ನನಗೆ ಅಲ್ಲಿ ನಡೆದ ಘಟನೆ ಬಗ್ಗೆ ತಿಳಿಸಿದಂತೆ ಎ.ಐ ವಿಡಿಯೋ ರಚಿಸಿದ್ದೆ. ಈ ಬಗ್ಗೆ ನನಗೆ ಸ್ಪಷ್ಟನೆ ಇ ಲ್ಲ ಎಂದಿದ್ದ. ಮತ್ತೊಂದೆಡೆ ವಿಡಿಯೋ ಪ್ರಸಾರದ ಮುನ್ನ ಅದರಲ್ಲಿ ಡಿಸ್ಕ್ಲೈಮರ್ ಹಾಕಿಯೇ ಹಾಕಿರುವುದಾಗಿ ಹೇಳಿಕೆ ನೀಡಿದ್ದ. ಬಳಿಕ ಈತ ತನಿಖೆಗೆ ಸೂಕ್ತ ಸ್ಪಂದನೆ ನೀಡದ ಕಾರಣ ಆತನ ಮನೆ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *