ಬೆಂಗಳೂರು : ರಾಜ್ಯದಲ್ಲಿ ಭೂಸುರಕ್ಷಾ ಕಾರ್ಯಕ್ರಮದಡಿ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಭೂ ಸುರಕ್ಷಾ ಕಾರ್ಯಕ್ರಮದಡಿ ಈವರೆಗೆ ಒಟ್ಟು 4,43,27,379 ಕೋಟಿ ಪುಟ ದಾಖಲೆಗಳನ್ನು ಸ್ಕಾö್ಯನ್ ಮಾಡಿ, ಇಂಡೆಕ್ಸ್ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಒಟ್ಟು 31 ತಾಲೂಕುಗಳಲ್ಲಿ ಡಿಜಿಟಲೀಕರಣ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಉಳಿದ ತಾಲೂಕುಗಳಲ್ಲೂ ದಾಖಲೆಗಳನ್ನು ಸ್ಕಾö್ಯನ್ ಮಾಡಿ ಡಿಜಿಟಲೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.ಮುಂದಿನ ಒಂದು ವರ್ಷದೊಳಗೆ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಇದರಿಂದ ಸಾರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವುದರ ಜೊತೆಗೆ, ದಾಖಲೆಗಳ ತಿರುಚುವಿಕೆ, ದಾಖಲೆಗಳ ನಾಪತ್ತೆ ಮೊದಲಾದವುಗಳನ್ನು ತಡೆಯಬಹುದಾಗಿದೆ. ರಾಜ್ಯದಲ್ಲಿ ಒಟ್ಟು 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್ ಬೀಟ್ ಮೊಬೈಲ್ ತಂತ್ರಾAಶದ ಮೂಲಕ ಒಟ್ಟು 91,000 ಎಕರೆ ಜಮೀನುಗಳು ಒತ್ತುವರಿಯಾಗಿರುವುದನ್ನು ಗುರುತಿಸಲಾಗಿದೆ ಎಂದು ಹೇಳಿದರು.
ಈಗಾಗಲೇ 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಿದ್ದು, ಈ ಪೈಕಿ 13.04 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ ಎಂದರು.
`