Share this news

ಉಡುಪಿ : ತಿರುಪತಿ ಮತ್ತು ಉಡುಪಿ ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಎನ್ನುವ ದಶಕಗಳ ಕನಸು ನನಸಾಗಿದ್ದು, ಹೈದರಾಬಾದ್ ಮಹಾನಗರಿಯ ಜತೆಯೂ ಈ ಮೂಲಕ ರೈಲು ಸೇವೆ ಆರಂಭವಾಗಿದೆ.

ಬುಧವಾರ ಮತ್ತು ಶನಿವಾರ ಸಂಜೆ 5ಕ್ಕೆ ಕುಂದಾಪುರ ಉಡುಪಿ ಮಾರ್ಗದ ಮೂಲಕ ಹೊರಡುವ ರೈಲು ಮರುದಿನ ಬೆಳಿಗ್ಗೆ 11ಗಂಟೆಗೆ ತಿರುಪತಿ ಬಳಿಯ ರೇಣುಗುಂಟ ನಿಲ್ದಾಣದ ಮೂಲಕ ಹೈದರಾಬಾದಿನ ಕಾಚಿಗುಡ ತಲುಪಲಿದೆ.

ಕಳೆದ ಒಂದು ದಶಕದಿಂದ ಕುಂದಾಪುರ ರೈಲು ಸಮಿತಿಯು ಈ ಬಗ್ಗೆ ನಿರಂತರ ಪ್ರಯತ್ನಿಸುತಿದ್ದು, ಇದೀಗ
ಸಂಸದನಾಗಿ ಆಯ್ಕೆಯಾದ ಮೊದಲ ನೂರು ದಿನದ ಕಾರ್ಯಕ್ರಮಗಳ ಪಟ್ಟಿಯಲ್ಲಿ ಈ ಮಹತ್ವಾಕಾಂಕ್ಷೆಯ ರೈಲು ಸೇವೆಯ ಗುರಿಯನ್ನು ಹೊಂದಿರುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಿಂದ ತಿರುಪತಿಗೆ ನೇರ ರೈಲು ಸೇವೆ ಬೇಕೆಂದು ಕಳೆದ ಒಂದು ದಶಕದ ಬೇಡಿಕೆ ಕೊನೆಗೂ ಈಡೇರಿದಂತಾಗಿದೆ

Leave a Reply

Your email address will not be published. Required fields are marked *