Share this news

ಬೆಂಗಳೂರು, ಡಿ. 11: ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ ರದ್ದುಗೊಳಿಸಿದೆ. ರಾಕೇಶ್ ಮಹಾಲಿಂಗಪ್ಪ ಎಲ್ ಮತ್ತು ಇತರರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಏಕಸದಸ್ಯ ಪೀಠ ಅಂಗೀಕರಿಸಿದ್ದು, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ನಿರ್ದೇಶಿಸಿ ಮೇ 14 ರಂದು ಹೊರಡಿಸಲಾದ ಸರ್ಕಾರಿ ಆದೇಶವನ್ನು ರದ್ದುಗೊಳಿಸಿ ಮೌಖಿಕ ಆದೇಶ ಹೊರಡಿಸಿದೆ. ಈ ಮೂಲಕ ಸಿದ್ದರಾಮಯ್ಯ ಸರ್ಕಾರಕ್ಕೆ ತೀವೃ ಮುಖಭಂಗ ಉಂಟಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಮುಚ್ಚುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ರಾಕೇಶ್ ಮಹಾಲಿಂಗಪ್ಪ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಸರ್ಕಾರಿ ವಕೀಲರು ಸಹ ಆಕ್ಷೇಪಣೆ ಸಲ್ಲಿಸಿದ್ದು, ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧವನ್ನು ಪೂರೈಸಲು ನಿರ್ಧರಿಸಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳ ಒಳಗೆ ಜನೌಷಧಿ ಕೇಂದ್ರಗಳ ಕಾರ್ಯಾಚರಣೆ ಅನಿವಾರ್ಯವಲ್ಲ ಎಂದು ವಾದಿಸಿದರು. ಅಲ್ಲದೇ ಆಸ್ಪತ್ರೆ ಆವರಣದೊಳಗಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಲಾಗಿದೆ. ಇನ್ನುಳಿದಂತೆ ಅದರಾಚೆಗೆ ಇರುವ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ ಎಂದು ತಿಳಿಸಿದರು.

ಬಳಿಕ ವಾದ ಮಾಡಿದ ಅರ್ಜಿದಾರರ ಪರ ವಕೀಲರು, ಈ ಬಗ್ಗೆ ಸಮಾಲೋಚಿಸದೆ ಅಥವಾ ಯಾವುದೇ ಮುಂಚಿತ ಮಾಹಿತಿ ನೀಡದ ತರಾತುರಿಯಲ್ಲಿ ಮುಚ್ಚಿಸಲಾಗಿದೆ. ಉಚಿತ ಔಷಧ ವಿತರಣೆಗೆ ಸಣ್ಣ ಕೇಂದ್ರವೊಂದು ಅಡ್ಡ ಬರುತ್ತಿದೆ ಎಂಬುದು ರಾಜ್ಯದ ವಾದವಾಗಲು ಸಾಧ್ಯವಿಲ್ಲ. ಸರ್ಕಾರ ಯಾವಾಗಲೂ ಉಚಿತವಾಗಿ ಔಷಧ ನೀಡುತ್ತಿದೆ. ನಾವಿಬ್ಬರೂ ಸಾರ್ವಜನಿಕ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಕೋರ್ಟ್​​ಗೆ ತಿಳಿಸಿದರು.

ಮೂಲಸೌಕರ್ಯ ಅಭಿವೃದ್ಧಿ, ಔಷಧ ದಾಸ್ತಾನು, ಉಪಕರಣಗಳು ಮತ್ತು ಪೀಠೋಪಕರಣಗಳು, ಸಿಬ್ಬಂದಿ ವೇತನ, ಕೇಂದ್ರವನ್ನು ನಡೆಸುವ ಉದ್ದೇಶಕ್ಕಾಗಿ ಅಗತ್ಯ ಪರವಾನಗಿ ಪಡೆದಿರುವುದು ಕಾನೂನುಬದ್ಧವಾಗಿದೆ. ಆದಾಗ್ಯೂ ಸಂವಿಧಾನದ 19(1)(ಜಿ) ಅಡಿಯಲ್ಲಿ ಅವರ ಜೀವನೋಪಾಯದ ಹಕ್ಕನ್ನು ಮತ್ತು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಬದುಕುವ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಪ್ರಬಲ ವಾದ ಮಂಡಿಸಿದರು.

ಈ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ನಿರ್ದೇಶಿಸಿ ಮೇ 14 ರಂದು ಹೊರಡಿಸಲಾದ ಆದೇಶವನ್ನು ರದ್ದುಗೊಳಿಸಿ ಆದೇಶ ಆದೇಶಿಸಿದ್ದಾರೆ.

    

   

             

     

             

           
   

 

 

   

             

     

             

       
   

  .      

   

             

     

             

           
   

 

 

   

             

     

             

       
   

                

   

             

     

             

           
   

 

 

   

             

     

             

       
   

 

 

 

    

   

             

     

             

           
   

 

 

   

             

     

             

       
   

  .      

   

             

     

             

           
   

 

 

   

             

     

             

       
   

                

   

             

     

             

           
   

 

 

   

             

     

             

       
   

 

Leave a Reply

Your email address will not be published. Required fields are marked *