Share this news

ಬೆಂಗಳೂರು: ರೈತರ ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕಂದಾಯ ಇಲಾಖೆ ಮುಂದಾಗಿದ್ದು, ಸಂಪೂರ್ಣ ಹಾಗೂ ಕನಿಷ್ಟ ದಾಖಲೆ ಹೊಂದಿರುವ ರೈತರಿಗೆ ಮುಂದಿನ ಎರಡು-ಮೂರು ವರ್ಷದಲ್ಲಿ ಖಚಿತವಾಗಿ ದರ್ಖಾಸ್ತು ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮಾಸಿಕ ಸಭೆಯಲ್ಲಿ ಕಳೆದ ಒಂದು ವರ್ಷದಿಂದ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿ ಅಧಿಕಾರಿಗಳನ್ನು ಗುರುತಿಸಿ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿ ಹಾಗೂ ಅಭಿನಂದನಾ ಪತ್ರ ನೀಡಲಾಯಿತು.
ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ವಾಸ್ತವದಲ್ಲಿ ರಾಜ್ಯಾದ್ಯಂತ ಎಷ್ಟು ಜನ ರೈತರ ಪೋಡಿ ಕೆಲಸ ಬಾಕಿ ಇದೆ ಎಂದು ಪರಿಶೀಲಿಸಲಾಗುತ್ತಿದೆ. ಸೆಪ್ಟೆಂಬರ್.2 ರಿಂದಲೇ ದರ್ಖಾಸ್ತು ಪೋಡಿ ಬಾಕಿ ಕೆಲಸ ಅಭಿಯಾನ ಮಾದರಿಯಲ್ಲಿ ಆರಂಭಿಸಲಾಗಿದೆ. ರೈತರ ನಮೂನೆ 1-5 ದಾಖಲೆಗಳನ್ನು ಪರಿಶೀಲಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಮಟ್ಟದಲ್ಲಿ ಕನಿಷ್ಟ 4 ಲಕ್ಷ ರೈತರಿಗೆ ಸಂಬAಧಿಸಿದ 69,437 ಸರ್ವೇ ನಂಬರ್ಗಳಲ್ಲಿ ನಮೂನೆ 1-5 ದಾಖಲೆಗಳನ್ನು ಪರಿಶೀಲಿಸಲಾಗಿದೆ. ಅಂದರೆ ಸಂಬAಧ ಪಟ್ಟ ರೈತರ ಕಡತಗಳನ್ನು ತಯಾರು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಈ ದಾಖಲೆಗಳನ್ನು ಒಂದುಗೂಡಿಸಿ ರೈತರು ಪೋಡಿಗೆ ಅರ್ಹರೇ ಎಂದು ಗುರುತಿಸಲಾಗುವುದು. ಆರ್‌ಐ, ಶಿರಸ್ತೇದಾರ್ ಹಾಗೂ ತಹಶೀಲ್ದಾರ್ ಈ ಬಗ್ಗೆ ಪರಿಗಣಿಸಿ ನಂತರ ನಮೂನೆ 6-10 ರ ಪ್ರಕ್ರಿಯೆಗೆ ಸರ್ವೇ ಇಲಾಖೆಗೆ ಪೋಡಿಗೆ ಶೀಫಾರಸು ಮಾಡುತ್ತಾರೆ. ತದನಂತರ ರೈತರಿಗೆ ಪೋಡಿ ಲಭ್ಯವಾಗುತ್ತದೆ ಎಂದರು.

                       in 

Leave a Reply

Your email address will not be published. Required fields are marked *