Share this news

ಕಲಬುರ್ಗಿ, ನ,13: ಆರೆಸೆಸ್ಸ್ ಪಥಸಂಚಲನಕ್ಕೆ ಯಾವುದೇ ಕಾರಣಕ್ಕೂ ಚಿತ್ತಾಪುರದಲ್ಲಿ ಅನುಮತಿ ನೀಡುವುದಿಲ್ಲವೆಂದು ಜಿದ್ದಿಗೆ ಬಿದ್ದಿದ್ದ ಸಚಿವ ಪ್ರಿಯಾಂಕ್ ಖರ್ಗೆಗೆ ಇದೀಗ ಹಿನ್ನಡೆಯಾಗಿದೆ. ನ್ಯಾಯಾಲಯದಲ್ಲಿ ಪಥಸಂಚಲನ ವಿಚಾರ ಸಾಕಷ್ಟು ಚರ್ಚೆಯಾಗಿದ್ದು, ಇದೀಗ ಆರ್ ಎಸ್ ಎಸ್ ಪಥಸಂಚಲನಕ್ಕೆ ಕಲಬುರ್ಗಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ಹೀಗಾಗಿ ನವೆಂಬರ್.16ರAದು ಕಲಬುರ್ಗಿಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಅವಕಾಶ ಸಿಕ್ಕಂತಾಗಿದೆ. ಕೇವಲ 300 ಕಾರ್ಯಕರ್ತರ ಪಥಸಂಚಲನಕ್ಕೆ ಸರ್ಕಾರದಿಂದ ಅನುಮತಿ ನೀಡಲಾಗಿದೆ.

ನವೆಂಬರ್​ 7ರಂದು ಇದೇ ವಿಚಾರವಾಗಿ ಕಲಬುರಗಿ ವಿಭಾಗೀಯ ಪೀಠದಲ್ಲಿ ನಡೆದಿದ್ದ ವಿಚಾರಣೆ ವೇಳೆ, ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ಜಿಲ್ಲಾಡಳಿತಕ್ಕೆ ನಾವು ನಮ್ಮ ಪ್ರಸ್ತಾವನೆ ನೀಡಿದ್ದೇವೆ. ಸರ್ಕಾರದ ನಿರ್ಧಾರವನ್ನು ಅಡ್ವೊಕೆಟ್ ಜನರಲ್ ತಿಳಿಸಬೇಕು ಎಂದು ಹೇಳಿದ್ದರು. ಜಿಲ್ಲಾಡಳಿತ ಪರವಾಗಿ ವಾದ ಮಾಡಿದ್ದ ಅಡ್ವೊಕೆಟ್ ಜನರಲ್ ಶಶಿಕರಣ್​ ಶೆಟ್ಟಿ, ಪಥಸಂಚನಲಕ್ಕಾಗಿ 11 ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳನ್ನು ಪರಿಶೀಲಿಸಲಾಗಿದ್ದು, ಪ್ರತಿಯೊಬ್ಬರಿಗೂ ಪ್ರತ್ಯೇಕ ದಿನ ಅವಕಾಶ ನೀಡಲು ಚಿಂತಿಸಲಾಗಿದೆ. ಇದಕ್ಕಾಗಿಒಂದು ವಾರ ಕಾಲಾವಕಾಶ ನೀಡುವಂತೆ ನ್ಯಾಯಾಲಕ್ಕೆ ಮನವಿ ಮಾಡಿದ್ದರು. ನ. 13 ಅಥವಾ 16ರಂದು ಕಾರ್ಯಕ್ರಮಕ್ಕೆ ಕಲ್ಯಾಣ ಮಂಟಪ ಲಭ್ಯವಿದೆ . ಹೀಗಾಗಿ ಅದೇ ದಿನಾಂಕದಲ್ಲಿ ಅನುಮತಿ ನೀಡಿ ಎಂದು ಈ ವೇಳೆ ಅರ್ಜಿದಾರು ಮನವಿ ಮಾಡಿದ್ದು, ಈ ಬಗ್ಗೆ ನಿರ್ಧರಿಸಲಾಗುವುದು ಎಂದು ಎಜಿ ನ್ಯಾಯಾಲಯಕ್ಕೆ ತಿಳಿಸಿದ್ದರು. ಈಗ ಅರ್ಜಿದಾರರ ಮನವಿಯಂತೆ ನ.16ರಂದು ಪಥಸಂಸಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *