ಉಡುಪಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರೀತಮ್. ಟಿ. ಮನೆಕೋಟೆ ಇವರು ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಬಿ.ತಿಪ್ಪೆಸ್ವಾಮಿ ಮತ್ತು ವಿಜಯಲಕ್ಷ್ಮಿ ಟಿ. ದಂಪತಿಗಳ ಸುಪತ್ರರಾಗಿರುತ್ತಾರೆ. ಇವರ ಸಾಧನೆಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು, ಸಿ.ಇ.ಒ ಮತ್ತು ಪ್ರಾಂಶುಪಾಲ ದಿನೇಶ್ ಎಂ. ಕೊಡವೂರುರವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
in