

ಕಾರ್ಕಳ,ಅ.23: ವಿದ್ಯಾರ್ಥಿಗಳ ಸೃಜನಶೀಲತೆ, ಕೌಶಲ್ಯಾಭಿವೃದ್ಧಿ ಹಾಗೂ ಸ್ವಾವಲಂಬನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಳೆದ 22 ವರ್ಷಗಳಿಂದ ಶ್ರಮಿಸುತ್ತಿರುವ ಚೇತನಾ ವಿಶೇಷ ಶಾಲೆಯಲ್ಲಿ ವಿದ್ಯಾರ್ಥಿಗಳು ಈ ಬಾರಿಯ ದೀಪಾವಳಿಗೆ ಬಣ್ಣ ಬಣ್ಣದ ವಿವಿಧ ಆಕಾರಗಳೊಂದಿಗೆ ಸಿದ್ಧಗೊಳಿಸಿದ ಮಣ್ಣಿನ ಹಣತೆಗಳನ್ನು ಸಿದ್ಧಗೊಳಿಸಿದ್ದಾರೆ. ಶಾಲಾ ದಾನಿಗಳು ಹಾಗೂ ಹಿತೈಷಿಗಳು ಆದ ಸಿ.ಎ. ಕಾರ್ಕಳ ಕಮಲಾಕ್ಷ ಕಾಮತ್ ಅವರು ಶಾರದಾ ಪೂಜೆಯ ಸಂದರ್ಭ ಮಾರಾಟಕ್ಕೆ ಹಣತೆಗಳನ್ನು ಬಿಡುಗಡೆಗೊಳಿಸಿ, ವಿಶೇಷಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಇದು ಉತ್ತಮ ಕಾರ್ಯ ಯೋಜನೆ ಎಂದು ವಿಶೇಷ ಮಕ್ಕಳ ಕಾರ್ಯವನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಂ. ಗಣಪತಿ ಪೈ, ಕಾರ್ಯದರ್ಶಿ ರಘುನಾಥ್ ಶೆಟ್ಟಿ, ಅತಿಥಿ ಗಣ್ಯರು, ಶಾಲಾ ಹಿತೈಷಿಗಳು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಣ್ಣಿನ ಬಣ್ಣದ ಹಣತೆಗಳನ್ನು ಕಳೆದ 4 ವರ್ಷದಿಂದ ಚೇತನಾ ವಿಶೇಷ ಶಾಲೆಯ ವಿದ್ಯಾರ್ಥಿಗಳು ತಯಾರಿಸುತ್ತಿದ್ದು ಈ ಬಾರಿ ವಿದ್ಯಾರ್ಥಿಗಳು ಹಣತೆ ತಯಾರಿಕೆಯ ಜೊತೆಗೆ ಪರಿಸರ ಸ್ನೇಹಿ ಬಟ್ಟೆ ಚೀಲಗಳು ಹಾಗೂ ಬತ್ತಿಯ ಕಟ್ಟುಗಳನ್ನು ಕೂಡ ತಯಾರಿಸಿದ್ದು ಇವುಗಳು ಮಾರಾಟಕ್ಕೆ ಲಭ್ಯವಿವೆ. ಕಳೆದ 3 ವರ್ಷವೂ ದೀಪಾವಳಿ ಹಬ್ಬ ಪ್ರಾರಂಭವಾಗುವ ಮೊದಲೇ ರಾಜ್ಯದ ಮೂಲೆ ಮೂಲೆಗಳಿಗೆ ಎಲ್ಲಾ ಹಣತೆಗಳು ಮಾರಾಟವಾಗಿರುವುದು ವಿಶೇಷ. ವಿದ್ಯಾರ್ಥಿಗಳು ಸ್ವಾವಲಂಬಿಯಾಗಿ ಬದುಕಲು ನಡೆಸುವ ಪ್ರಯತ್ನದಲ್ಲಿ ಇದೀಗ ತಾವು ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳು ತಯಾರಿಸಿದ ವಸ್ತುಗಳನ್ನು ಖರೀದಿಸಿ ಪ್ರೋತ್ಸಾಹಿಸುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9480531469, 7619255170 ಅನ್ನು ಸಂಪರ್ಕಿಸುವAತೆ ವಿನಂತಿಸಿದ್ದಾರೆ.






.
.
.
.
.
.
.
.
.
.
.
.
.
.
.
.
.
.
.
.
