ಕಾರ್ಕಳ: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಧ್ಯದಲ್ಲೇ ಮುಖ್ಯಮಂತ್ರಿ ಆಗುತ್ತಾರೆ , ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲಎಂದು ಮಾಜಿ ಸಿಎಂ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ.
ಕಾರ್ಕಳದ ಗಾಂಧಿ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ, ಅದು ಅವರಿಗೆ ಸಿಕ್ಕಿದ ವರವಾಗಿದೆ. ಈಗಾಗಲೇ ಈ ವಿಚಾರದಲ್ಲಿ ಎಲ್ಲಾ ಸೆಟ್ಲ್ ಮೆಂಟ್ ಮುಗಿದಿದೆ ಎನ್ನುವ ಸ್ಪೋಟಕ ವಿಚಾರವನ್ನು ವೀರಪ್ಪ ಮೊಯ್ಲಿ ಹೇಳಿಕೆ ನೀಡಿದ್ದಾರೆ
