ನವದೆಹಲಿ : ವಿದ್ಯಾರ್ಥಿಗಳು ಸಾರ್ವಜನಿಕ ವೈ-ಫೈ ಬಳಸಿ ಇ-ಮೇಲ್ ಖಾತೆ ತೆರೆಯಬಾರದು ಜೊತೆಗೆ ನೆಟ್ ಬ್ಯಾಂಕಿAಗ್ ಬಳಸಬೇಡಿ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗಿರುವ ಯುಎಸ್‌ಬಿ ಚಾರ್ಜಿಂಗ್ ಪಾಯಿಂಟ್‌ಗಳಿAದ ಮೊಬೈಲ್ ಅನ್ನು ಚಾರ್ಜ್ ಮಾಡುವ ಮೂಲಕ ಖಾತೆಯನ್ನು ಹ್ಯಾಕ್ ಮಾಡಬಹುದು. ಆದ್ದರಿಂದ ವಿದ್ಯಾರ್ಥಿಗಳು ಮೇಲ್ ಮತ್ತು ಅದಕ್ಕೆ ಲಗತ್ತಿಸಲಾದ ಫೈಲ್‌ಗಳನ್ನು ಎಚ್ಚರಿಕೆಯಿಂದ ತೆರೆಯಬೇಕು ಮತ್ತು ಯಾವುದೇ ಸಾಫ್ಟ್ವೇರ್ ಅನ್ನು ಅಧಿಕೃತ ವೆಬ್‌ಸೈಟ್‌ನಿಂದ ಮಾತ್ರ ಡೌನ್‌ಲೋಡ್ ಮಾಡಬೇಕು ಎಂದು ಯುಜಿಸಿ ಎಚ್ಚರಿಕೆ ನೀಡಿದೆ.
ಸೈಬರ್ ಅಪರಾಧವನ್ನು ತಡೆಯುವ ಅಭಿಯಾನದಲ್ಲಿ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಹ ತೊಡಗಿಸಿಕೊಳ್ಳುತ್ತಿದೆ. ಅದೇ ಸಮಯದಲ್ಲಿ, ಸೈಬರ್ ಅಪರಾಧದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಯುಜಿಸಿ ಎಲ್ಲಾ ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳನ್ನು ಕೇಳಿದೆ.