
ನವದೆಹಲಿ, ಜ.17: ಫ್ರಾನ್ಸ್ನ ಡಸಾಲ್ಟ್ ಏವಿಯೇಷನ್ ನಿಂದ 114 ರಫೇಲ್ ಯುದ್ಧ ವಿಮಾನ ಖರೀದಿಸುವ 3.25 ಲಕ್ಷ ಕೋಟಿ ರೂ ಪ್ರಸ್ತಾಪಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಭಾರತದ ರಕ್ಷಣಾ ಖರೀದಿ ಮಂಡಳಿ (ಡಿಪಿಬಿ) ಅನುಮೋದನೆ ಶುಕ್ರವಾರ ನೀಡಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಈ ಒಪ್ಪಂದ ಅಂತಿಮಗೊಳಿಸಿಲಾಗಿದೆ.
ಫ್ರೆAಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಭಾರತಕ್ಕೆ ಭೇಟಿ ನೀಡುವ ಮುನ್ನವೇ ಈ ಒಪ್ಪಂದಕ್ಕೆ ಅನುಮೋದನೆ ದೊರೆತಿದ್ದು, ಮ್ಯಾಕ್ರನ್ ಅವರು ಫೆಬ್ರವರಿ 17ರಿಂದ 19ರವೆಗೆ ಭಾರತ ಪ್ರವಾಸ ಕೈಗೊಳ್ಳಲಿದ್ದು,ಅವರು ಭಾರತ-ಫ್ರಾನ್ಸ್ ಇಯರ್ ಆಫ್ ಇನ್ನೋವೇಶನ್ ಮತ್ತು ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಇಂಪ್ಯಾಕ್ಟ್ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ.
ಪಾಕಿಸ್ತಾನ ಹಾಗೂ ಚೀನಾ ಗಡಿಯಲ್ಲಿ ಪದೇಪದೇ ಉದ್ವಿಗ್ನ ಸ್ಥಿತಿ ನಿರ್ಮಾಣವಾಗುತ್ತಿರುವ ಹಿನ್ನಲೆಯಲ್ಲಿ ವಾಯುಪಡೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರಫೇಲ್ ಯುದ್ಧ ವಿಮಾನಗಳನ್ನು ಖರೀಸಲಾಗುತ್ತಿದೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ.

.
.
.
.
