Share this news

ಕಾರ್ಕಳ: ಸಾಹಿತ್ಯ ,ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆಸಲ್ಲಿಸಿ ಅಗಲಿದ ಪತ್ರಕರ್ತ ಡಾ. ಶೇಖರ ಅಜೆಕಾರು ಅವರ ಹೆಸರಿನಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಡಾ ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ,
ರಾಜ್ಯಮಟ್ಟದಲ್ಲಿ ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅದ್ಯಕ್ಷ ಮಹಮ್ಮದ್ ಷರೀಫ್ ಹೇಳಿದರು.
ಅವರು ಶನಿವಾರ ಕಾರ್ಕಳ ಪ್ರವಾಸಿ‌ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ,ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಕನಿಷ್ಠ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಪತ್ರಕರ್ತರು ಯಾ ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರಶಸ್ತಿಯು ಹತ್ತು ಸಾವಿರ ಪ್ರಶಸ್ತಿ ನಗದು ಹಾಗೂ ರಜತ ಫಲಕ ಒಳಗೊಂಡಿರುತ್ತದೆ‌ ಎಂದರು
ಸ್ವವಿವರ ಹಾಗೂ ಇತ್ತೀಚಿನ ಭಾವಚಿತ್ರವನ್ನೊಳಗೊಂಡ ಅರ್ಜಿಯನ್ನು ಮೊಹಮ್ಮದ್ ಶರೀಫ್ ಅಧ್ಯಕ್ಷ ರು , ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಗ್ಲೆಗುಡ್ಡೆ ಪೋಸ್ಟ್ ಕುಕ್ಕುoದೂರು ,ಕಾರ್ಕಳ ತಾಲೂಕು 576117 ,ಇವರಿಗೆ ಜೂನ್ 21 ತಾರೀಕಿನೊಳಗೆ ಕಳುಹಿಸಿಕೊಡಬಹುದಾಗಿದೆ. ತದನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ‌9845846213, 9945857561 ಸಂಪರ್ಕಿಸಬಹುದು ಎಂದು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಕಾರ್ಯದರ್ಶಿ ಹರೀಶ್ ಆಚಾರ್ಯ, ಕೋಶಾಧಿಕಾರಿ ಮಹಮ್ಮದ್ ಖಲೀಲ್, ಉಪಸ್ಥಿತರಿದ್ದರು.

  

 

 

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *