ಬೆಂಗಳೂರು: ಕರ್ನಾಟಕ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ. ಸಲೀಂ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಿದೆ.
ಡಾ.. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದಾರೆ. ಡಾ. ಎಂ ಎ. ಸಲೀಂ ಅವರು ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು.
ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್ ಅವರು ನೂತನ ಡಿಜಿಪಿ ಡಾ. ಎಂ. ಎ ಸಲೀಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಐಪಿಎಸ್ ಅಧಿಕಾರಿ, ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿರುವ ಡಾ. ಅಲೋಕ ಮೋಹನ್ ಅವರು ಬುಧವಾರವೇ ಸೇವೆಯಿಂದ ನಿವೃತ್ತರಾಗಿದ್ದಾರೆ.